ಶುಕ್ರವಾರ, 12 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷಿ-ಶಿಕ್ಷಣ-ಆರೋಗ್ಯ ಕ್ಷೇತ್ರದಲ್ಲಿ ತಂತ್ರಜ್ಞಾನದ ಪಾತ್ರ ದೊಡ್ಡದು: ಪಿಎಂ ಮೋದಿ

Published 29 ಮಾರ್ಚ್ 2024, 5:25 IST
Last Updated 29 ಮಾರ್ಚ್ 2024, 5:25 IST
ಅಕ್ಷರ ಗಾತ್ರ

ನವದೆಹಲಿ: ಕೃಷಿ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಲ್ಲಿ ತಂತ್ರಜ್ಞಾನವು ದೊಡ್ದ ಪಾತ್ರವನ್ನು ವಹಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದ್ದಾರೆ.

ಮೈಕ್ರೋಸಾಫ್ಟ್ ಸಹ ಸಂಸ್ಥಾಪಕ ಬಿಲ್‌ ಗೇಟ್ಸ್‌ ಅವರೊಂದಿಗಿನ ಸಂವಾದದಲ್ಲಿ ಈ ಕುರಿತು ಮಾತನಾಡಿದ ಪ್ರಧಾನಿ ಮೋದಿ, ವಿಶ್ವದಲ್ಲಿ ಡಿಜಿಟಲ್ ವಿಭಜನೆಯ ಬಗ್ಗೆ ಮಾತುಗಳು ಬರುತ್ತಿವೆ. ಆದರೆ ಭಾರತದಲ್ಲಿ ಅದಾಗಲು ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಕಡಿಮೆ ವೆಚ್ಚದಲ್ಲಿ ಗರ್ಭಕಂಠದ ಕ್ಯಾನ್ಸರ್ ಲಸಿಕೆ ಅಭಿವೃದ್ಧಿಪಡಿಸಲು ಸ್ಥಳೀಯ ಸಂಶೋಧನೆಗಾಗಿ ವಿಜ್ಞಾನಿಗಳಿಗೆ ಹಣಕಾಸಿನ ನೆರವನ್ನು ನೀಡುವುದಾಗಿ ಅವರು ಹೇಳಿದ್ದಾರೆ.

ನಮ್ಮ ಸರ್ಕಾರವು ವಿಶೇಷವಾಗಿ ಹೆಣ್ಣು ಮಕ್ಕಳಿಗೆ ಲಸಿಕೆ ಲಭ್ಯವಾಗುವಂತೆ ಮಾಡಲಿದೆ ಎಂದು ಅವರು ತಿಳಿಸಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವಿನೊಂದಿಗೆ ಮತ್ತೆ ಅಧಿಕಾರಕ್ಕೆ ಬರುವುದಾಗಿ ಪ್ರಧಾನಿ ಮೋದಿ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಎಲ್ಲರಿಗೂ ಸಮಾನ ಅವಕಾಶ ನೀಡುವ ತಂತ್ರಜ್ಞಾನದ ಪ್ರಜಾಪ್ರಭುತ್ವೀಕರಣದಲ್ಲಿ ನನಗೆ ನಂಬಿಕೆಯಿದೆ. ಈ ನಿಟ್ಟಿನಲ್ಲಿ ತಂತ್ರಜ್ಞಾನವನ್ನು ಹಳ್ಳಿ ಹಳ್ಳಿಗೂ ತಲುಪಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

ತಂತ್ರಜ್ಞಾನದ ಮೇಲೆ ನಾನು ಅತೀವ ಆಸಕ್ತಿ ಹೊಂದಿದ್ದೇನೆ. ಆದರೆ ತಂತ್ರಜ್ಞಾನದ ಗುಲಾಮನಲ್ಲ. ಒಂದು ಮಗುವಿನಂತೆ ಕುತೂಹಲವನ್ನು ಹೊಂದಿದ್ದೇನೆ ಎಂದು ಬೀಲ್ ಗೇಟ್ಸ್ ಪ್ರಶ್ನೆಗೆ ಉತ್ತರವಾಗಿ ಹೇಳಿದ್ದಾರೆ.

ಭಾರತದಲ್ಲಿ ಡಿಜಿಟಲ್ ಕ್ರಾಂತಿ ಬಗ್ಗೆ ಮಾತನಾಡಿದ ಅವರು, ಏಕಸ್ವಾಮ್ಯಕ್ಕೆ ಒಳಗಾಗಬಾರದು. ಸಾಮಾನ್ಯ ಜನರು ಅದನ್ನು ಮುನ್ನಡೆಸಬೇಕು. ನಾಲ್ಕನೇ ಕೈಗಾರಿಕಾ ಕ್ರಾಂತಿಯಲ್ಲಿ ಡಿಜಿಟಲ್ ತಂತ್ರಜ್ಞಾನ ಮಹತ್ವದ ಪಾತ್ರವನ್ನು ವಹಿಸಲಿದೆ. ಕೋವಿಡ್ ಸಮಯದಲ್ಲಿ ಲಸಿಕೆ ಪ್ರಮಾಣಪತ್ರ ಒದಗಿಸಲು ಅವಿಷ್ಕಾರ ಮಾಡಿದ 'ಕೋ-ವಿನ್' ಜಾಲತಾಣದ ಬಗ್ಗೆಯೂ ಪ್ರಧಾನಿ ಮೋದಿ ಉಲ್ಲೇಖಿಸಿದ್ದಾರೆ.

ಈ ವೇಳೆ ಭಾರತದಲ್ಲಿ ಡಿಜಿಟಲ್ ಮೂಲಸೌಕರ್ಯದ ಬಗ್ಗೆ ಬಿಲ್ ಗೇಟ್ಸ್ ಮೆಚ್ಚುಗೆ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT