ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಡಿದು ಅಮ್ಮನಿಗೆ ಹೊಡೆಯುತ್ತಿದ್ದ ಅಪ್ಪನ ನಡವಳಿಕೆಗೆ ನೊಂದು ಬಾಲಕಿ ಆತ್ಮಹತ್ಯೆ

Published 27 ಏಪ್ರಿಲ್ 2024, 13:08 IST
Last Updated 27 ಏಪ್ರಿಲ್ 2024, 13:08 IST
ಅಕ್ಷರ ಗಾತ್ರ

ಖಾರ್‌ಗೋನ್‌: ಮದ್ಯಪಾನ ಮಾಡಿ ತಾಯಿಗೆ ಥಳಿಸುತ್ತಿದ್ದ ತಂದೆಯ ವರ್ತನೆಯಿಂದ ನೊಂದು 17 ವರ್ಷದ ಬಾಲಕಿಯೊಬ್ಬಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದ ಖಾರ್‌ಗೋನ್‌ ಜಿಲ್ಲೆಯಲ್ಲಿ ಶುಕ್ರವಾರ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾವತ್‌ ಪಲಾಸಿಯಾ ಗ್ರಾಮದಲ್ಲಿ ಈ ಘಟನೆ ನಡೆದಿದ್ದಾಗಿ ಬರ್ವಾ ಪೊಲೀಸ್‌ ಠಾಣೆಯ ಉಸ್ತುವಾರಿ ನಿರ್ಮಲ್ ಶ್ರೀನಿವಾಸ್ ತಿಳಿಸಿದ್ದಾರೆ.

ಪತ್ರ ಬರೆದಿಟ್ಟು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದು, ‘ನನ್ನ ತಂದೆ ನಿತ್ಯ ಕುಡಿದು ಬಂದು ತಾಯಿಯ ಮೇಲೆ ದೌರ್ಜನ್ಯ ಎಸಗುತ್ತಿದ್ದರು. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ತೆಗೆದುಕೊಳ್ಳಲಿಲ್ಲ’ ಎಂದು ಹೇಳಿದ್ದಾಳೆ.

ಪೊಲೀಸರು ಕ್ರಮ ತೆಗೆದುಕೊಂಡಿಲ್ಲ ಎನ್ನುವ ಆರೋಪವನ್ನು ನಿರಾಕರಿಸಿರುವ ನಿರ್ಮಲ್, ದೂರು ಬಂದ ಬಳಿಕ ಅವರಿಂದ ಮುಚ್ಚಳಿಕೆ ಬರೆಯಿಸಿ ಕಳುಹಿಸಿದ್ದೆವು ಎಂದು ಹೇಳಿದ್ದಾರೆ.

ಈ ಹಿಂದೆ ದೂರು ನೀಡಿದಾಗ ಪೊಲೀಸರು ಬಾಲಕಿಯ ತಂದೆಯನ್ನು ಬಂಧಿಸಿದ್ದರು. ಈಗ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಖಾರ್‌ಗೋನ್‌ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಧರ್ಮರಾಜ್ ಮೀನಾ ತಿಳಿಸಿದ್ದಾರೆ.

ಮೃತ ಬಾಲಕಿಯ ಕಿರಿಯ ಸಹೋದರಿ ಕೂಡ ತಂದೆ ಕುಡಿದು ಬಂದು ತಾಯಿಗೆ ಹೊಡೆಯುತ್ತಿದ್ದರೆಂದೂ, ಹಲವು ಬಾರಿ ದೂರು ನೀಡಿದರೂ ಪೊಲೀಸರು ಕ್ರಮ ತೆಗೆದುಕೊಂಡಿಲ್ಲವೆಂದೂ ದೂರಿದ್ದಾರೆ.

ತಂದೆಯ ಈ ನಡವಳಿಕೆಯಿಂದ ಬೇಸತ್ತು ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಾಯಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT