ಭುಜ್: ಗುಜರಾತ್ನ ಕಚ್ ಜಿಲ್ಲೆಯಲ್ಲಿ ಆಳವಾದ ಬೋರ್ವೆಲ್ಗೆ ಬಿದ್ದಿದ್ದ 18 ವರ್ಷದ ಯುವತಿಯನ್ನು 33 ಗಂಟೆಗಳ ಸತತ ರಕ್ಷಣಾ ಕಾರ್ಯಾಚರಣೆ ಬಳಿಕ ಹೊರತೆಗೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಕಚ್ ಜಿಲ್ಲೆಯ ಭುಜ್ ತಾಲೂಕಿನ ಕಂಡೆರೈ ಗ್ರಾಮದಲ್ಲಿ ಸೋಮವಾರ ಬೆಳಿಗ್ಗೆ 6.30ರ ಸುಮಾರಿಗೆ ಈ ಘಟನೆ ಸಂಭವಿಸಿತ್ತು. 540 ಅಡಿ ಆಳವಿದ್ದ ಕೊಳವೆಬಾವಿಗೆ ಯುವತಿ ಬಿದ್ದಿದ್ದು, 490 ಅಡಿ ಆಳದಲ್ಲಿ ಸಿಲುಕಿಕೊಂಡಿದ್ದಳು’ ಎಂದು ಅವರು ಹೇಳಿದ್ದಾರೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎಫ್), ಗಡಿ ಭದ್ರತಾ ಪಡೆ (ಬಿಎಸ್ಎಫ್), ಅಗ್ನಿಶಾಮಕ ದಳದ ಸಿಬ್ಬಂದಿ, ಪೊಲೀಸರು ಮತ್ತು ಸ್ಥಳೀಯ ಆಡಳಿತ ಅಧಿಕಾರಿಗಳು ನಡೆಸಿದ ರಕ್ಷಣಾ ಕಾರ್ಯಾಚರಣೆಯಲ್ಲಿ ಯುವತಿಯನ್ನು ಬೋರ್ವೆಲ್ನಿಂದ ಹೊರತೆಗೆಯಲಾಯಿತು ಎಂದು ಅವರು ಹೇಳಿದ್ದಾರೆ.

ಸತತ 33 ಗಂಟೆಗಳ ರಕ್ಷಣಾ ಕಾರ್ಯಾಚರಣೆಯ ಮೂಲಕ ಯುವತಿಯನ್ನು ಹೊರತೆಗೆಯಲಾಗಿದ್ದು, ಆಕೆಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.