ಫರಿದಾಬಾದ್: 16 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಗರ್ಭಪಾತ ಮಾಡಿಸಿಕೊಳ್ಳುವಂತೆ ಬಲವಂತ ಮಾಡಿದ ಆರೋಪದ ಮೇಲೆ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಜಸ್ವಂತ್(37), ಸುಲ್ತಾನ್ ಹಾಗೂ ಸಂತ್ರಸ್ತೆಯ ನೆರೆಹೊರೆ ನಿವಾಸಿ ಸಿಕಂದರ್(55) ಬಂಧಿತರು. ಆರೋಪಿಗಳ ವಿರುದ್ಧ ಪೋಕ್ಸೊ ಹಾಗೂ ಬಿಎನ್ಎಸ್ನ ವಿವಿಧ ಸೆಕ್ಷನ್ಗಳಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅತ್ಯಾಚಾರಕ್ಕೆ ಒಳಗಾಗಿದ್ದ ಬಾಲಕಿಗೆ ಗರ್ಭಪಾತ ಮಾಡಿಸಿರುವ ಕುರಿತು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಪ್ರದೀಪಕುಮಾರ್ ಎಂಬುವವರು ಪೊಲೀಸರಿಗೆ ದೂರು ನೀಡಿದ್ದರು.

‘ಜಸ್ವಂತ್, ತನ್ನ ಕೋಣೆಗೆ ನನ್ನನ್ನು ಕರೆದುಕೊಂಡ ಹೋದ ನಂತರ, ಆತ ಮತ್ತು ಸುಲ್ತಾನ್ ನನ್ನ ಮೇಲೆ ಅತ್ಯಾಚಾರ ಎಸಗಿದರು. ಈ ಬಗ್ಗೆ ಯಾರಿಗಾದರೂ ತಿಳಿಸಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದರು. ನೆರೆ ಮನೆ ನಿವಾಸಿ ಸಿಕಂದರ್ ಕೂಡ ಹಲವು ಬಾರಿ ಅತ್ಯಾಚಾರ ಎಸಗಿದ್ದಾಗಿ ಬಾಲಕಿ ತಿಳಿಸಿದಳು’ ಎಂದು ಪ್ರದೀಪಕುಮಾರ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.