ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರತ್ಯೇಕತಾವಾದಿ ಸಂಘಟನೆ ತೆಹ್ರೀಕ್‌ ಇ ಹುರಿಯತ್‌ 5 ವರ್ಷ ನಿಷೇಧಿಸಿ ಆದೇಶ

ಪಾಕಿಸ್ತಾನ ಪರ ಪ್ರತ್ಯೇಕತಾವಾದಿ ಸಂಘಟನೆ ‘ತೆಹ್ರೀಕ್‌ ಇ ಹುರಿಯತ್‌ (ಟಿಇಎಚ್‌)’ ಅನ್ನು ಐದು ವರ್ಷಗಳ ಅವಧಿಗೆ ಕೇಂದ್ರ ಸರ್ಕಾರ ನಿಷೇಧಿಸಿದೆ
Published 31 ಡಿಸೆಂಬರ್ 2023, 13:26 IST
Last Updated 31 ಡಿಸೆಂಬರ್ 2023, 13:26 IST
ಅಕ್ಷರ ಗಾತ್ರ

ನವದೆಹಲಿ: ಪಾಕಿಸ್ತಾನ ಪರ ಪ್ರತ್ಯೇಕತಾವಾದಿ ಸಂಘಟನೆ ‘ತೆಹ್ರೀಕ್‌ ಇ ಹುರಿಯತ್‌ (ಟಿಇಎಚ್‌)’ ಅನ್ನು ಐದು ವರ್ಷಗಳ ಅವಧಿಗೆ ಕೇಂದ್ರ ಸರ್ಕಾರ ನಿಷೇಧಿಸಿದೆ.

ಪ್ರತ್ಯೇಕತಾವಾದಿ ನಾಯಕ ಸೈಯದ್ ಅಲಿ ಶಾ ಗಿಲಾನಿ 2004ರಲ್ಲಿ ಈ ಸಂಘಟನೆಯನ್ನು ಸ್ಥಾಪಿಸಿದ್ದರು. ನಿಷೇಧಿಸುವ ತೀರ್ಮಾನ ಕುರಿತು ಗೃಹ ಸಚಿವ ಅಮಿತ್‌ ಶಾ ಎಕ್ಸ್‌ನಲ್ಲಿ ಸಂದೇಶ ಪೋಸ್ಟ್ ಮಾಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತ ವಿರೋಧಿ ಭಾವನೆ ಕೆರಳಿಸುವುದು ಹಾಗೂ ಭಯೋತ್ಪಾದನೆ ಚಟುವಟಿಕೆಗಳಿಗೆ ಉತ್ತೇಜನ ನೀಡುತ್ತಿದ್ದ ಚಟುವಟಿಕೆ ಹಿನ್ನೆಲೆಯಲ್ಲಿ ತೆಹ್ರೀಕ್‌ ಇ ಹುರಿಯತ್ ಅನ್ನು ಕಾನೂನುಬಾಹಿರ ಚಟುವಟಿಕೆ (ನಿಯಂತ್ರಣ) ಕಾಯ್ದೆಯಡಿ ನಿಷೇಧಿಸಲಾಗಿದೆ ಎಂದು ಶಾ ತಿಳಿಸಿದ್ದಾರೆ.

ಮಿರ್ವೈಜ್‌ ಉಮೆರ್ ಫಾರೂಕ್‌ ನೇತೃತ್ವದ ಹುರಿಯತ್‌ ಬಣದಿಂದ ಹೊರಬಿದ್ದ ಬಳಿಕ 2004ರಲ್ಲಿ ಗಿಲಾನಿ ಈ ಸಂಘಟನೆಯನ್ನು ಸ್ಥಾಪಿಸಿದ್ದರು. ಇದರ ಹಲವು ಪದಾಧಿಕಾರಿಗಳ ವಿರುದ್ಧ ಕಾಶ್ಮೀರದಲ್ಲಿ ಭಯೋತ್ಪಾದನೆ ಚಟುವಟಿಕೆಗೆ ಉತ್ತೇಜನ ನೀಡಲು ಹಣಕಾಸು ಸಂಗ್ರಹಿಸಿದ ಆರೋಪ ಕುರಿತಂತೆ ಎನ್‌ಐಎ ಪ್ರಕರಣ ದಾಖಲಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT