ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಉದ್ಯೋಗಕ್ಕಾಗಿ ಭೂಮಿ ಹಗರಣ; ಇ.ಡಿ ವಿಚಾರಣೆಗೆ ಹಾಜರಾದ ತೇಜಸ್ವಿ ಯಾದವ್

Published 30 ಜನವರಿ 2024, 7:49 IST
Last Updated 30 ಜನವರಿ 2024, 7:49 IST
ಅಕ್ಷರ ಗಾತ್ರ

ಪಟ್ನಾ: ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ತೇಜಸ್ವಿ ಯಾದವ್ ಅವರು ಮಂಗಳವಾರ ಇಲ್ಲಿನ ಇಡಿ ಕಚೇರಿಗೆ ಆಗಮಿಸಿದ್ದು, ಉದ್ಯೋಗಕ್ಕಾಗಿ ಭೂಮಿ ಹಗರಣಕ್ಕೆ ಸಂಬಂಧಿಸಿದಂತೆ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಿಹಾರದ ಮಾಜಿ ಉಪಮುಖ್ಯಮಂತ್ರಿ ಅವರು ಬೆಳಿಗ್ಗೆ 11.35ರ ಸುಮಾರಿಗೆ ಇಡಿ ಕಚೇರಿಯನ್ನು ತಲುಪಿದರು ಎಂದು ಅವರು ಹೇಳಿದ್ದಾರೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಅವರ ತಂದೆ ಮತ್ತು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಒಂಬತ್ತು ಗಂಟೆಗಳ ಕಾಲ ವಿಚಾರಣೆ ನಡೆಸಿದ್ದರು.

ಕೇಂದ್ರ ತನಿಖಾ ಸಂಸ್ಥೆ ಜನವರಿ 19ರಂದು ಪ್ರಸಾದ್ ಮತ್ತು ಅವರ ಪುತ್ರ ತೇಜಸ್ವಿ ಯಾದವ್ ಅವರಿಗೆ ವಿಚಾರಣೆಗಾಗಿ ಹೊಸದಾಗಿ ಸಮನ್ಸ್ ಜಾರಿಗೊಳಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT