ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾನನಷ್ಟ ಪ್ರಕರಣ: ವರ್ಗಾವಣೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತೇಜಸ್ವಿಯಾದವ್‌

Published 4 ನವೆಂಬರ್ 2023, 12:27 IST
Last Updated 4 ನವೆಂಬರ್ 2023, 12:27 IST
ಅಕ್ಷರ ಗಾತ್ರ

ಅಹಮದಾಬಾದ್‌: ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್‌ ಅವರು,  ತಮ್ಮ ವಿರುದ್ಧ ದಾಖಲಾಗಿರುವ ಮಾನನಷ್ಟ ಪ್ರಕರಣವನ್ನು ವರ್ಗಾಯಿಸುವಂತೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ ಎಂದು ವಿಚಾರಣಾ ನ್ಯಾಯಾಲಯಕ್ಕೆ ಶನಿವಾರ ಮಾಹಿತಿ ನೀಡಿದರು.

ಸುಪ್ರೀಂ ಕೋರ್ಟ್‌ ನ.6ರಂದು ಈ ಬಗ್ಗೆ ವಿಚಾರಣೆ ನಡೆಸುವ ಸಾಧ್ಯತೆ ಇದೆ ಎಂದೂ ತಿಳಿಸಿದರು.

‘ಗುಜರಾತಿನವರು ಮಾತ್ರ ಕೊಲೆಗಡುಕರು’ ಎಂಬ ಹೇಳಿಕೆಗೆ ಸಂಬಂಧಿಸಿದಂತೆ ದಾಖಲಾದ ಮಾನನಷ್ಟ ಪ್ರಕರಣದ ವಿಚಾರಣೆಗೆ ಹೆಚ್ಚುವರಿ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ಡಿ.ಜೆ.ಪಾರ್ಮರ್‌ ಎದುರು ಹಾಜರಾಗುವಂತೆ ಸಮನ್ಸ್‌ ಜಾರಿ ಮಾಡಲಾಗಿತ್ತು. ಯಾದವ್ ಇದರಿಂದ ವಿನಾಯಿತಿ ಕೋರಿದ್ದರು. ಹೀಗಾಗಿ, ಕೋರ್ಟ್‌ ವಿಚಾರಣೆಯನ್ನು ಡಿಸೆಂಬರ್‌ 2ಕ್ಕೆ ಮುಂದೂಡಿದೆ. 

ದೂರುದಾರರ ಪರ ವಕೀಲ ಹರೀಶ್‌ ಮೆಹ್ತಾ, ಸುಪ್ರೀಂ ಕೋರ್ಟ್‌ ಪ್ರಕರಣವನ್ನು ಕೈಗೆತ್ತಿಕೊಂಡಿಲ್ಲ. ಈ ಕುರಿತು ಯಾವುದೇ ನಿರ್ದೇಶನಗಳನ್ನೂ ನೀಡಿಲ್ಲ. ಹೀಗಾಗಿ ನ್ಯಾಯಾಲಯವು ಯಾದವ್‌ ಅವರ ಗೈರಿನಲ್ಲೂ ವಿಚಾರಣೆ ಮುಂದುವರಿಸಬೇಕು ಎಂದು ವಾದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT