‘ಜೆಡಿಯು ನೇತೃತ್ವದ ಎನ್ಡಿಎ 20 ವರ್ಷಗಳ ಕಾಲ ಆಡಳಿತ ನಡೆಸಿದ್ದರೂ ಬಿಹಾರ ಇನ್ನೂ ಬಡ ರಾಜ್ಯವಾಗಿಯೇ ಉಳಿದಿದೆಯಲ್ಲ’ ಎಂದು ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಪ್ರಶ್ನಿಸಿದರು.

ಸಹರ್ಸಾ ಜಿಲ್ಲೆಯ ಸಿಮ್ರಿ ಭಕ್ತಿಯಾರ್ಪುರದಲ್ಲಿ ಶುಕ್ರವಾರ ನಡೆದ ರ್ಯಾಲಿಯಲ್ಲಿ ಮಾತನಾಡಿದ ಅವರು, ‘ಎನ್ಡಿಎ ಮರಳಿ ಅಧಿಕಾರಕ್ಕೆ ಬಂದರೆ ನಿತೀಶ್ ಕುಮಾರ್ ಅವರನ್ನು ಅದು ಪುನಃ ಮುಖ್ಯಮಂತ್ರಿ ಮಾಡುವುದಿಲ್ಲ’ ಎಂದು ಹೇಳಿದರು.

‘ಬಿಹಾರದ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬುದನ್ನು ಚುನಾಯಿತ ಶಾಸಕರು ನಿರ್ಧರಿಸುತ್ತಾರೆ ಎಂದು ಗೃಹ ಸಚಿವ ಅಮಿತ್ ಶಾ ಅವರು ಇತ್ತೀಚೆಗೆ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಅವರು, ಎನ್ಡಿಎ ಅಧಿಕಾರಕ್ಕೆ ಮರಳಿದರೆ ನಿತೀಶ್ ಅವರು ಮುಖ್ಯಮಂತ್ರಿ ಆಗುವುದಿಲ್ಲ ಎಂಬ ಸಂದೇಶ ರವಾನಿಸಿದ್ದಾರೆ’ ಎಂದು ತಿಳಿಸಿದರು.

‘ಕೇಂದ್ರ ಸರ್ಕಾರವು ರಾಜ್ಯದಲ್ಲಿನ ಭ್ರಷ್ಟರು ಮತ್ತು ಅಪರಾಧಿಗಳನ್ನು ರಕ್ಷಿಸುತ್ತಿದೆ’ ಎಂದು ‘ಇಂಡಿಯಾ’ ಮೈತ್ರಿಕೂಟದ ಮುಖ್ಯಮಂತ್ರಿ ಅಭ್ಯರ್ಥಿಯೂ ಆಗಿರುವ ತೇಜಸ್ವಿ ದೂರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.