ಪಟ್ನಾ: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ನನ್ನ ವಿರುದ್ಧ ಬಳಸುವ ಪದಗಳನ್ನು ಆಶೀರ್ವಾದ ಎಂದುಕೊಳ್ಳುವೆ ಎಂದು ಆರ್‌ಜೆಡಿ ನಾಯಕ ನಾಯಕ ತೇಜಸ್ವಿ ಯಾದವ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಹಿರಿಯರಾದ ನಿತೀಶ್ ಕುಮಾರ್ ಅವರು ಮಾನಸಿಕವಾಗಿ ಮತ್ತು ದೈಹಿಕವಾಗಿ ದಣಿದಿದ್ದಾರೆ. ಅವರು ನನ್ನ ವಿರುದ್ಧ ಏನೇ ಪದಗಳನ್ನು ಬಳಸಿದರೂ ಕೂಡ ನಾನು ಆಶೀರ್ವಾದದಂತೆ ಸ್ವೀಕರಿಸುತ್ತೇನೆ’ ಎಂದು ತಿಳಿಸಿದ್ದಾರೆ.

‘ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಉದ್ಯೋಗ ಮತ್ತು ಅಭಿವೃದ್ಧಿ ವಿಚಾರಗಳು ಪ್ರಮುಖ ಪಾತ್ರವಹಿಸಿವೆ. ಮತದಾರರು ಸೂಕ್ತವಾದದ್ದನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ... ಪ್ರತಿಪಕ್ಷಗಳ ಲೇವಡಿಗೆ ಗುರಿಯಾದಮೋದಿ, ನಿತೀಶ್ ಕುಮಾರ್ ಪ್ರತ್ಯೇಕ ಜಾಹೀರಾತು

ಕೆಲವು ವ್ಯಕ್ತಿಗಳ ಕೇವಲ ಸ್ವಪ್ರತಿಷ್ಠೆಗಾಗಿ ರಾಜಕೀಯ ಮಾಡುತ್ತಿದ್ದಾರೆ. ಆದನ್ನು ಕೆಲಸದಲ್ಲಿ ತೋರಿಸುವುದಿಲ್ಲ ಎಂದು ಪರೋಕ್ಷವಾಗಿ ನಿತೀಶ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು.

ಬಿಹಾರ ವಿಧಾನಸಭೆ ಚುನಾವಣೆ ಮೂರು ಹಂತಗಳಲ್ಲಿ ನಡೆಯಲಿದೆ. ಅಕ್ಟೋಬರ್ 28, ನವೆಂಬರ್ 3, ನವೆಂಬರ್ 7 ರಂದು ಚುನಾವಣೆ ನಡೆಯಲಿದ್ದು, ನ.10ರಂದು ಫಲಿತಾಂಶ ಪ್ರಕಟವಾಗಲಿದೆ.

ಇದನ್ನೂ ಓದಿ... ಪ್ರಜಾಮತ: ‘ಕೈ’ ದಡ ಮುಟ್ಟಲು ತೇಜಸ್ವಿ ಅನಿವಾರ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.