ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಕಾರ್ಫ್‌ ಧರಿಸಲು ಅಡ್ಡಿ: ಪ್ರಾಂಶುಪಾಲ ಸೇರಿ ನಾಲ್ವರ ವಿರುದ್ಧ ಪ್ರಕರಣ

Published 24 ಜೂನ್ 2023, 17:10 IST
Last Updated 24 ಜೂನ್ 2023, 17:10 IST
ಅಕ್ಷರ ಗಾತ್ರ

ಹೈದರಾಬಾದ್‌: ವಿದ್ಯಾರ್ಥಿನಿಗೆ ಧರ್ಮದ ಅನುಸಾರ ಸ್ಕಾರ್ಫ್‌ ಧರಿಸಲು ಆಕ್ಷೇಪ ವ್ಯಕ್ತಪಡಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಇಲ್ಲಿನ ಖಾಸಗಿ ಶಾಲೆಯ ಪ್ರಾಂಶುಪಾಲರು ಮತ್ತು ಮೂವರು ಶಿಕ್ಷಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದರು.

‘10ನೇ ತರಗತಿ ವಿದ್ಯಾರ್ಥಿನಿ ನೀಡಿದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಾಗಿದೆ. ಸ್ಕಾರ್ಫ್‌ ಧರಿಸಿ ತರಗತಿಗೆ ಬರಬಾರದೆಂದು ಜೂನ್ 23ರಂದು ಪ್ರಾಂಶುಪಾಲರು ಮತ್ತು ಶಿಕ್ಷಕರು ಹೇಳಿದ್ದರು ಎಂದು ಅವರು ಆರೋಪಿಸಿದ್ದಾರೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ 298 (ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಉದ್ದೇಶದಿಂದ ಅವಹೇಳನ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT