ಹೈದರಾಬಾದ್: ತೆಲಂಗಾಣದಲ್ಲಿ ನಾಮಪತ್ರ ಸಲ್ಲಿಸುವ ವೇಳೆ ಬಿಆರ್‌ಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ ಉಂಟಾಗಿದ್ದು ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ.
ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಸುವಾಗ ರಂಗಾ ರೆಡ್ಡಿ ಜಿಲ್ಲೆಯ ಇಬ್ರಾಹಿಂ ಪಟ್ಟಣಂನಲ್ಲಿ ಈ ಘಟನೆ ನಡೆದಿದೆ.
ಬಿಆರ್‌ಎಸ್ ಅಭ್ಯರ್ಥಿ ಕಿಶನ್ ರೆಡ್ಡಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ಮಲ್ಲಾ ರೆಡ್ಡಿ ಅವರು ಏಕಕಾಲದಲ್ಲಿ ನಾಮಪತ್ರ ಸಲ್ಲಿಸಲು ಮುಂದಾದರು. ಈ ವೇಳೆ ಕಾರ್ಯಕರ್ತರ ನಡುವೆ ಘರ್ಷಣೆ ಉಂಟಾಯಿತು. ಈ ಘಟನೆಯಲ್ಲಿ ಮಹಿಳೆ ಸೇರಿದಂತೆ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.