ಹೈದರಾಬಾದ್:ತೆಲಂಗಾಣದ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರಿಗೆ ಕೋವಿಡ್-19 ದೃಢಪಟ್ಟಿದೆ ಎಂದು ಮುಖ್ಯ ಕಾರ್ಯದರ್ಶಿ ಸೋಮೇಶ್ ಕುಮಾರ್ ಅವರ ಅಧಿಕೃತ ಪ್ರಕಟಣೆ ಸೋಮವಾರ ತಿಳಿಸಿದೆ.
ಸೌಮ್ಯ ಲಕ್ಷಣಗಳನ್ನು ಹೊಂದಿದ್ದ ಅವರೀಗ ಐಸೋಲೇಶನ್ನಲ್ಲಿದ್ದಾರೆ. ಸದ್ಯ ಅವರ ತೋಟದ ಮನೆಯಲ್ಲಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ವೈದ್ಯರ ತಂಡ ಅವರ ಆರೋಗ್ಯದ ಮೇಲೆ ನಿಗಾ ಇಡುತ್ತಿದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.
ಏಪ್ರಿಲ್ 14 ರಂದು ನಲ್ಗೊಂಡ ಜಿಲ್ಲೆಯ ಹಲಿಯಾದಲ್ಲಿ ನಡೆದ ಬೃಹತ್ ಚುನಾವಣಾ ರ್ಯಾಲಿಯಲ್ಲಿ ಮುಖ್ಯಮಂತ್ರಿಗಳು ಮಾತನಾಡಿದ್ದರು.
Telangana CM K Chandrasekhar Rao tests positive for COVID19. He has mild symptoms. He has been advised isolation. A team of doctors is monitoring his health: State Chief Secretary