ಹೈದರಾಬಾದ್: ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ತಿಂಗಳಲ್ಲಿ 15 ದಿನ ಫಾರ್ಮ್ಹೌಸ್ನಲ್ಲೇ ಕಾಲ ಕಳೆಯುತ್ತಾರೆ ಎಂದು ಕೇಂದ್ರ ಸಚಿವ ಜಿ.ಕೃಷ್ಣಾ ರೆಡ್ಡಿ ಆರೋಪಿಸಿದ್ದಾರೆ.

ಮಂಗಳವಾರ ಹೈದರಾಬಾದ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಎಂಟು ವರ್ಷದಿಂದ ಕೆಸಿಆರ್ ಅವರು ಸರ್ವಾಧಿಕಾರದಿಂದ ರಾಜ್ಯ ನಡೆಸುತ್ತಿದ್ದಾರೆ. ತೆಲಂಗಾಣ ರಾಜ್ಯ ಅಭಿವೃದ್ಧಿಯಲ್ಲಿ ತೀರಾ ಹಿಂದುಳಿದಿದೆ ಎಂದಿದ್ದಾರೆ.

ಇಂತಹ ಪರಿಸ್ಥಿತಿಯಲ್ಲಿ ಸಿಎಂ ತಿಂಗಳಲ್ಲಿ 15 ದಿನ ಫಾರ್ಮ್ಹೌಸನಲ್ಲೇ ಕಾಲಹರಣ ಮಾಡುತ್ತಾರೆ. ಜನರನ್ನು ಭೇಟಿಯಾಗುವುದಿಲ್ಲ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಕೆಸಿಆರ್ ಅವರ ಎಂಟು ವರ್ಷಗಳ ಆಡಳಿತದಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ ಎಂದು ಅವರು ಆರೋಪಿಸಿದ್ದಾರೆ.

ಕೆಸಿಆರ್ ಅವರಂತಹ ಮುಖ್ಯಮಂತ್ರಿ ತೆಲಂಗಾಣದ ಜನಕ್ಕೆ ಬೇಕಾಗಿಲ್ಲ. ಬರುವ ಚುನಾವಣೆಯಲ್ಲಿ ಖಂಡಿತವಾಗಿಯೂ ಜನ ಇವರಿಗೆ ಬುದ್ಧಿ ಕಲಿಸುತ್ತಾರೆ. ತೆಲಂಗಾಣದಲ್ಲಿ ಶೀಘ್ರದಲ್ಲೇ ಬಿಜೆಪಿ ಆಡಳಿತ ಬರಲಿದೆ ಎಂದು ರೆಡ್ಡಿ ಹೇಳಿರುವುದಾಗಿ ಎಎನ್ಐ ಟ್ವೀಟ್ ಮಾಡಿದೆ.

ತೆಲಂಗಾಣ: ರಾಜ್ಯಪಾಲರ ಔತಣಕೂಟಕ್ಕೆ ಕೆಸಿಆರ್ ಗೈರು, ರಾಜಕೀಯ ವಲಯದಲ್ಲಿ ಚರ್ಚೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.