ಶನಿವಾರ, 2 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೆಲಂಗಾಣದ ಜನರು ರಾಹುಲ್‌ ಗಾಂಧಿಗೆ ತಕ್ಕ ಉತ್ತರ ನೀಡಲಿದ್ದಾರೆ: ಸಚಿವ ಅಮಿತ್‌ ಶಾ

Published 25 ನವೆಂಬರ್ 2023, 9:44 IST
Last Updated 25 ನವೆಂಬರ್ 2023, 9:44 IST
ಅಕ್ಷರ ಗಾತ್ರ

ಹೈದರಾಬಾದ್: ‘ಪ್ರಧಾನಿ ನರೇಂದ್ರ ಮೋದಿ ಅವರನ್ನು ‘ಅಪಶಕುನ‘ ಎಂದು ಕರೆದಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಯವರಿಗೆ ಮುಂಬರುವ ಚುನಾವಣೆಗಳಲ್ಲಿ ಜನರು ತಕ್ಕ ಉತ್ತರ ನೀಡಲಿದ್ದಾರೆ‘ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಶನಿವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೋದಿ ಕುರಿತು ಅಸಂಬದ್ಧ ಪದಗಳ ಬಳಕೆ ಮಾಡುತ್ತಿರುವ ರಾಹುಲ್‌ ಗಾಂಧಿಗೆ ತೆಲಂಗಾಣದ ಜನರು ವೋಟುಗಳ ಮೂಲಕವೇ ಉತ್ತರಿಸಲಿದ್ದಾರೆ ಎಂದರು.

ನವೆಂಬರ್‌19ರಂದು ಗುಜರಾತ್‌ನ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾ ಮತ್ತು ಭಾರತದ ನಡುವೆ ಏಕದಿನ ವಿಶ್ವಕಪ್‌ ಫೈನಲ್ ಪಂದ್ಯಾವಾಳಿ ನಡೆದಿತ್ತು. ಈ ಪಂದ್ಯ ವೀಕ್ಷಿಸಲು ಪ್ರಧಾನಿ ತೆರಳಿದ್ದರು. ಫೈನಲ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ಸೋಲನುಭವಿಸಿತ್ತು. ಈ ಸೋಲಿಗೆ ಮೋದಿ ಪಂದ್ಯ ವೀಕ್ಷಿಸಲು ತೆರಳಿದ್ದೆ ಕಾರಣ ಎಂದು ರಾಹುಲ್‌ ವ್ಯಂಗ್ಯವಾಡಿದ್ದರು.

ಪಿಎಂ ಎಂದರೆ 'ಪನೌತಿ ಮೋದಿ' ಎಂದು ರಾಹುಲ್‌ ಗಾಂಧಿ ಹೇಳಿದ್ದರು. ಹಿಂದಿಯ ಪನೌತಿ ಎಂಬ ಪದಕ್ಕೆ ಕನ್ನಡದಲ್ಲಿ ಅಪಶಕುನ ಎಂಬರ್ಥವಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT