ಹೈದರಾಬಾದ್: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು ‘ತೆಲಂಗಾಣ ದ್ವೇಷ ಭಾಷಣ ಮತ್ತು ದ್ವೇಷಾಪರಾಧಗಳ ತಡೆ ಮಸೂದೆ–2026’ ಅನ್ನು ವಿಧಾನಸಭೆಯಲ್ಲಿ ಭಾನುವಾರ ಮಂಡಿಸಿದೆ.

ದ್ವೇಷ ಭಾಷಣಕ್ಕೆ ಸಂಬಂಧಿಸಿದ ಅಪರಾಧ ಪ್ರಕರಣಗಳಲ್ಲಿ ತಪ್ಪಿತಸ್ಥರಿಗೆ ಗರಿಷ್ಠ 10 ವರ್ಷ ಜೈಲು ಶಿಕ್ಷೆ ವಿಧಿಸುವ ಪ್ರಸ್ತಾವವನ್ನು ಈ ಮಸೂದೆ ಒಳಗೊಂಡಿದೆ.

ಒಂದೊಮ್ಮೆ, ಈ ಮಸೂದೆಯು ಅಂಗೀಕಾರಗೊಂಡು ಕಾಯ್ದೆಯಾದಲ್ಲಿ ಕರ್ನಾಟಕದ ನಂತರ ಇಂತಹ ಕ್ರಮ ಕೈಗೊಳ್ಳುವ ಎರಡನೇ ರಾಜ್ಯ ತೆಲಂಗಾಣ ಆಗಲಿದೆ.

ಮುಖ್ಯಮಂತ್ರಿ ಎ.ರೇವಂತ್ ರೆಡ್ಡಿ ಅವರ ಪರವಾಗಿ ಸಂಸದೀಯ ವ್ಯವಹಾರಗಳ ಸಚಿವ ಡಿ.ಶ್ರೀಧರ ಬಾಬು ಈ ಮಸೂದೆ ಮಂಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.