ಹೈದರಾಬಾದ್: ಬದುಕಿರುವಾಗಲೇ ತಮ್ಮ ಸಮಾಧಿಯನ್ನು ನಿರ್ಮಿಸಿಕೊಂಡಿದ್ದ ತೆಲಂಗಾಣದ ನಕ್ಕಾ ಇಂದ್ರಯ್ಯ (80) ಅವರು ಭಾನುವಾರ (ಜನವರಿ 11) ನಿಧನರಾಗಿದ್ದಾರೆ.

ಇಂದ್ರಯ್ಯ ಅವರು, ಜಿಲ್ಲೆಯ ಲಕ್ಷ್ಮಿಪುರಂ ಗ್ರಾಮದಲ್ಲಿ ತಮ್ಮ ಪತ್ನಿಯ ಸಮಾಧಿಯ ಪಕ್ಕದಲ್ಲಿಯೇ ತಮ್ಮ ಸಮಾಧಿಯನ್ನು ನಿರ್ಮಿಸಿಕೊಂಡಿದ್ದರು. ಸಮಾಧಿ ಪಕ್ಕದಲ್ಲಿ ಜೀವನ ಮತ್ತು ಮರಣದ ಕಹಿ ಸತ್ಯದ ಕುರಿತ ಸಂದೇಶವಿರುವ ಫಲಕವನ್ನು ಹಾಕಿದ್ದರು. ಅದರಲ್ಲಿ ‘ಮರಣ ಅನಿವಾರ್ಯ. ಸತ್ತ ನಂತರ ಯಾರೂ ಸಂಪತ್ತನ್ನು ಕೊಂಡೊಯ್ಯುವುದಿಲ್ಲ’ ಎಂದು ಬರೆಯಲಾಗಿದೆ.

ಪ್ರತಿನಿತ್ಯ ಸಮಾಧಿ ಇರುವ ಸ್ಥಳಕ್ಕೆ ಬಂದು ಸ್ಥಳವನ್ನು ಸ್ವಚ್ಛಗೊಳಿಸುವುದು, ಗಿಡಗಳಿಗೆ ನೀರುಣಿಸುವುದು ಹಾಗೇ ಅಲ್ಲಿಯೇ ಕೆಲ ಕಾಲ ಕುಳಿತು ಸಮಯ ಕಳೆಯುವುದು ಅವರ ದಿನಚರಿಯಾಗಿತ್ತು.
.ಚಾಮರಾಜನಗರ: 20 ವರ್ಷಗಳ ಹಿಂದೆ ತಮಗಾಗಿ ಸಮಾಧಿ ನಿರ್ಮಿಸಿಕೊಂಡಿದ್ದ ವ್ಯಕ್ತಿ ಸಾವು.
ಇಂದ್ರಯ್ಯ ಅವರ ಹಿರಿಯ ಸಹೋದರ ನಕ್ಕಾ ಭೂಮಯ್ಯ ಮಾತನಾಡಿ, 'ಅವರು ಬದುಕಿರುವಾಗಲೇ ತಮ್ಮ ಸಮಾಧಿಯನ್ನು ನಿರ್ಮಿಸಿಕೊಂಡಿದ್ದರು. ಗ್ರಾಮದಲ್ಲಿ ಚರ್ಚ್ ಅನ್ನು ಸಹ ನಿರ್ಮಿಸಿದ್ದಾರೆ. ಜತೆಗೆ ತಮ್ಮ ಹಳ್ಳಿಗಾಗಿ ಹಲವು ಒಳ್ಳೆಯ ಕೆಲಸಗಳನ್ನೂ ಮಾಡಿದ್ದಾರೆ. ತಮ್ಮ ಜೀವಿತಾವಧಿಯಲ್ಲಿ ಗಳಿಸಿದ್ದ ಸಂಪತ್ತನ್ನು ತಮ್ಮ ನಾಲ್ವರು ಮಕ್ಕಳಿಗೆ ಸಮಾನಾಗಿ ಹಂಚಿದ್ದಾರೆ. ಅವರಿಗಾಗಿ ಮನೆಗಳನ್ನೂ ನಿರ್ಮಿಸಿದ್ದಾರೆ ಎಂದು ಹೇಳಿದ್ದಾರೆ.

'ಸತ್ತ ನಂತರ ಯಾರೂ ಸಂಪತ್ತನ್ನು ಕೊಂಡೊಯ್ಯುವುದಿಲ್ಲ, ಆದರೆ ನೀವು ಇತರರಿಗೆ ನೀಡಿದ ದಾನ ಮಾತ್ರ ನಿಮ್ಮೊಂದಿಗೆ ಶಾಶ್ವತವಾಗಿ ಉಳಿಯುತ್ತದೆ' ಎಂದು ಇಂದ್ರಯ್ಯ ಅವರು ಯಾವಾಗಲೂ ಹೇಳುತ್ತಿದ್ದರು ಎಂದು ಗ್ರಾಮಸ್ಥ ಶ್ರೀನಿವಾಸ್ ನೆನಪಿಸಿಕೊಂಡರು.

ಇಂದ್ರಯ್ಯ ಅವರ ಕೊನೆಯ ಆಸೆಯಂತೆ, ಅವರೇ ನಿರ್ಮಿಸಿಕೊಂಡಿದ್ದ ಸಮಾಧಿಯಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗಿದೆ. ಈ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಸೇರಿದ್ದರು.

‘ನಾನು ನಾಲ್ಕೈದು ಮನೆಗಳು, ಒಂದು ಶಾಲೆ, ಒಂದು ಚರ್ಚ್ ಕಟ್ಟಿದ್ದೇನೆ. ಈಗ ನನ್ನ ಸಮಾಧಿಯನ್ನೂ ನಿರ್ಮಿಸಿದ್ದೇನೆ. ಸಮಾಧಿಯ ನಿರ್ಮಾಣ ಹಲವರಿಗೆ ನೋವುಂಟು ಮಾಡಬಹುದು, ಆದರೆ ನನಗೆ ಸಂತೋಷವನ್ನು ನೀಡಿದೆ. ನನ್ನ ಮರಣದ ನಂತರ ಮಕ್ಕಳಿಗೆ ತೊಂದರೆ ಕೊಡಬಾರದೆಂದು ನಾನೇ ನಿರ್ಮಿಸಿದ್ದೇನೆ’ ಎಂದು ಅವರು ಹಿಂದೆ ಪಿಟಿಐಗೆ ತಿಳಿಸಿದ್ದರು.
.‘ಸಾವು ಅನಿವಾರ್ಯ'..ಬದುಕಿರುವಾಗಲೇ ಸಮಾಧಿ ನಿರ್ಮಿಸಿಕೊಂಡ ತೆಲಂಗಾಣದ ವ್ಯಕ್ತಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.