ಹೈದರಾಬಾದ್: ತೆಲಂಗಾಣದ ನಾರಾಯಣಪೇಟೆ ಕ್ಷೇತ್ರದಿಂದ ನಗರಸಭೆ ಚುನಾವಣೆಗೆ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಪಕ್ಷದ ಅಭ್ಯರ್ಥಿಯ ಸಾವಿನ ಕುರಿತು ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ತೆಲಂಗಾಣ ಡಿಜಿಪಿ ಕಚೇರಿ ಎದುರು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಈ ವೇಳೆ, ಪೊಲೀಸರು ಅವರನ್ನು ಬಂಧಿಸಿದ್ದಾರೆ.

‘ಆಡಳಿತದಲ್ಲಿರುವ ಕಾಂಗ್ರೆಸ್ ಸರ್ಕಾರ ಹಾಗೂ ರಾಜ್ಯ ಕ್ರೀಡಾ ಸಚಿವ ವಕಿಟಿ ಶ್ರೀಹರಿ ಅವರು ಬಿಜೆಪಿ ಅಭ್ಯರ್ಥಿಯು ಚುನಾವಣೆಯಲ್ಲಿ ಸ್ಪರ್ಧಿಸದಂತೆ ಬೆದರಿಕೆ ಹಾಕಿದ್ದರು. ಅಭ್ಯರ್ಥಿ ಸಾವಿನ ಕುರಿತು ನೈಜ ತನಿಖೆಯಾಗಬೇಕು’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಎನ್. ರಾಮಚಂದ್ರ ರಾವ್ ಅವರು ಆಗ್ರಹಿಸಿದ್ದಾರೆ.

ಇದೇ ವೇಳೆ, ತನಿಖೆಯ ಪಾರದರ್ಶಕತೆಯ ದೃಷ್ಟಿಯಿಂದ ವಕಿಟಿ ಶ್ರೀಹರಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಅಥವಾ ರಾಜ್ಯ ಸರ್ಕಾರ ಅವರನ್ನು ಸಚಿವ ಸಂಪುಟದಿಂದ ಹೊರಗಿಡಬೇಕು ಎಂದು ಒತ್ತಾಯಿಸಿದ್ದಾರೆ.

ಫೆ.11ರಂದು ತೆಲಂಗಾಣದ ನಗರಸಭೆ ಚುನಾವಣೆಗೆ ಮತದಾನ ಜರುಗಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.