ಸಂಗಾರೆಡ್ಡಿ: ಪಾಶಮೈಲಾರಂ ಕೈಗಾರಿಕಾ ಪ್ರದೇಶದಲ್ಲಿರುವ ಔಷಧ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟವರ ಕುಟುಂಬಕ್ಕೆ ₹1 ಕೋಟಿ ಪರಿಹಾರ ನೀಡುವ ಕುರಿತಾಗಿ ಸಿಗಾಚಿ ಇಂಡಸ್ಟ್ರೀಸ್ ಲಿಮಿಟೆಡ್ ಕಂಪನಿಯ ಜೊತೆಗೆ ತಮ್ಮ ಸರ್ಕಾರ ಮಾತುಕತೆ ನಡೆಸುತ್ತಿದೆ ಎಂದು ತೆಲಂಗಾಣದ ಮುಖ್ಯಮಂತ್ರಿ ರೇವಂತ್ ರೆಡ್ಡಿ ಇಂದು (ಮಂಗಳವಾರ) ಹೇಳಿದ್ದಾರೆ.

ಪಾಶಮೈಲಾರಂನಲ್ಲಿರುವ ಫಾರ್ಮಾ ಸ್ಥಾವರದಲ್ಲಿ ಸೋಮವಾರ ಸಂಭವಿಸಿದ್ದ ಸ್ಫೋಟದಲ್ಲಿ 36 ಕಾರ್ಮಿಕರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದರು.

ಇಂದು ಘಟನಾ ಸ್ಥಳಕ್ಕೆ ಭೇಟಿ ಕೊಟ್ಟಿರುವ ರೇವಂತ್ ರೆಡ್ಡಿ, ಗಾಯಾಳುಗಳನ್ನು ಭೇಟಿಯಾಗಿದ್ದಾರೆ. 'ಮೃತರ ಸಂಖ್ಯೆ 36ಕ್ಕೆ ಏರಿಕೆಯಾಗಿದ್ದು, ಕೆಲವರು ನಾಪತ್ತೆಯಾಗಿದ್ದಾರೆ. ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ' ಎಂದು ಹೇಳಿದ್ದಾರೆ.

'ಗಂಭೀರವಾಗಿ ಗಾಯಗೊಂಡವರಿಗೆ ತಲಾ ₹10 ಲಕ್ಷ ಮತ್ತು ಸಣ್ಣ ಪುಟ್ಟ ಗಾಯಗೊಂಡವರಿಗೆ ತಲಾ 5 ಲಕ್ಷ ಪರಿಹಾರ ನೀಡಲಾಗುವುದು. ಗಾಯಗೊಂಡವರ ವೈದಕೀಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ' ಎಂದು ಅವರು ತಿಳಿಸಿದ್ದಾರೆ.

'ಮೃತರ ಕುಟುಂಬಳಿಗೆ ತಲಾ ₹1 ಕೋಟಿ ಪರಿಹಾರ ನೀಡುವುದಕ್ಕೆ ಸಂಬಂಧಿಸಿದಂತೆ ಸರ್ಕಾರವು ಕಂಪನಿಯ ಆಡಳಿತ ಮಂಡಳಿಯೊಂದಿಗೆ ಮಾತುಕತೆ ನಡೆಸುತ್ತಿದೆ. ಸರ್ಕಾರ ಹಾಗೂ ಕಂಪನಿಯ ಕಡೆಯಿಂದ ₹1 ಕೋಟಿ ಪರಿಹಾರ ನೀಡುವಂತೆ ನಾನು ಆದೇಶ ಹೊರಡಿಸಿದ್ದೇನೆ' ಎಂದು ಅವರು ಹೇಳಿದ್ದಾರೆ.

'ಅಲ್ಲದೆ ತುರ್ತು ವೆಚ್ಚಕ್ಕಾಗಿ ಮೃತರ ಕುಟುಂಬಗಳಿಗೆ ತಲಾ ₹1 ಲಕ್ಷ ಹಾಗೂ ಗಾಯಗೊಂಡವರಿಗೆ ₹50 ಸಾವಿರ ನೀಡಲು ಸೂಚಿಸಲಾಗಿದೆ' ಎಂದು ತಿಳಿಸಿದ್ದಾರೆ.

ಸ್ಫೋಟ ಸಂಭವಿಸಿದ್ದಾಗ 143 ಮಂದಿ ಜನರು ಇದ್ದರು. ಅದರಲ್ಲಿ 56 ಮಂದಿ ಸಂಪರ್ಕದಲ್ಲಿದ್ದಾರೆ. ಉಳಿದವರಿಗಾಗಿ ಹುಡುಕಾಟ ನಡೆಯುತ್ತಿದೆ.
.ತೆಲಂಗಾಣ | ಔಷಧ ಕಾರ್ಖಾನೆಯಲ್ಲಿ ಸ್ಫೋಟ: 13 ಮಂದಿ ಸಾವು.ಅಕ್ರಮ ಗಣಿಗಾರಿಕೆ ಪ್ರಕರಣ: ಜನಾರ್ದನ ರೆಡ್ಡಿಗೆ ತೆಲಂಗಾಣ ಹೈಕೋರ್ಟ್ನಿಂದ ಜಾಮೀನು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.