ಶನಿವಾರ, 24 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೆಲಂಗಾಣದ ಮೂವರು ಪೊಲೀಸ್‌ ಅಧಿಕಾರಿಗಳ ಅಮಾನತಿಗೆ ಆದೇಶ

Published 29 ನವೆಂಬರ್ 2023, 16:24 IST
Last Updated 29 ನವೆಂಬರ್ 2023, 16:24 IST
ಅಕ್ಷರ ಗಾತ್ರ

ನವದೆಹಲಿ: ಚುನಾವಣೆ ಹಿನ್ನೆಲೆಯಲ್ಲಿ ನಗದು ವಶಕ್ಕೆ ತೆಗೆದುಕೊಂಡಿದ್ದ ಪ್ರಕರಣವನ್ನು ದುರ್ಬಲಗೊಳಿಸಲು ಪ್ರಯತ್ನಿಸಿದ ಆರೋಪದ ಮೇಲೆ ತೆಲಂಗಾಣದ ಮೂವರು ಪೊಲೀಸ್ ಅಧಿಕಾರಿಗಳನ್ನು ಅಮಾನತುಪಡಿಸಲು ಚುನವಣಾ ಆಯೋಗವು ಬುಧವಾರ ಆದೇಶ ಹೊರಡಿಸಿದೆ.

ಉಪ ಪೊಲೀಸ್‌ ಆಯುಕ್ತರ ಹೆಸರೂ ಈ ಪಟ್ಟಿಯಲ್ಲಿದೆ.

ರಾಜ್ಯದ ಮುಖ್ಯ ಕಾರ್ಯದರ್ಶಿಗೆ ಆಯೋಗ ಪತ್ರ ಬರೆದಿದೆ. ₹18 ಲಕ್ಷ ನಗದು, ಒಂದು ಮೊಬೈಲ್‌ ಫೋನ್‌ ಮತ್ತು ಚೆಕ್‌ ಬುಕ್‌ಗಳನ್ನು ವಶಪಡಿಸಿಕೊಂಡ ಬಳಿಕ ಅಧಿಕಾರಿಗಳು, ಕಾನೂನು ಕ್ರಮಗಳನ್ನು ಕೈಗೊಳ್ಳುವ ಬದಲು ಪ್ರಕರಣವನ್ನು ದುರ್ಬಲಗೊಳಿಸಲು ಪ್ರಯತ್ನಿಸಿದ್ದಾರೆ ಎಂದು ಆಯೋಗಕ್ಕೆ ತಿಳಿದುಬಂದಿದೆ. ಅವರು ತನಿಖೆಯ ದಿಕ್ಕುತಪ್ಪಿಸಲು ಪ್ರಯತ್ನಿಸಿದ್ದರು ಎಂದೂ ಹೇಳಲಾಗಿದೆ ಎಂದು ಪತ್ರದಲ್ಲಿ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT