ಮುಂಬೈ: ಮುಂಬೈ ನಗರಕ್ಕೆ ಹೊಂದಿಕೊಂಡಿರುವ ಥಾಣೆ, ಕಲ್ಯಾಣ್ ದೊಂಬಿವಿಲಿ, ಮೀರಾ ಭಯಂದರ್ ನಗರ ಪ್ರದೇಶ ವ್ಯಾಪ್ತಿಯಲ್ಲಿ ಗುರುವಾರದಿಂದ 10 ದಿನಗಳವರೆಗೆ ಸಂಪೂರ್ಣ ಲಾಕ್‌ಡೌನ್ ಜಾರಿಗೊಳಿಸಲಾಗಿದೆ.

ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದನ್ನು ಗಮನಿಸಿ, ಈ ಮೂರು ನಗರಗಳಲ್ಲಿನ ನಗರಾಡಳಿತ ಸಂಸ್ಥೆಗಳು 10 ದಿನಗಳವರೆಗೆ ಲಾಕ್‌ಡೌನ್ ಜಾರಿಗೆ ಜಂಟಿಯಾಗಿ ನಿರ್ಧರಿಸಿ, ಕ್ರಮ ತೆಗೆದುಕೊಂಡಿವೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಗತ್ಯ ಸೇವೆಗಳು ಮತ್ತು ವೈದ್ಯಕೀಯ ತುರ್ತು ಸೇವೆಗಳಿಗೆ ಲಾಕ್‌ಡೌನ್‌ನಿಂದ ವಿನಾಯಿತಿ ನೀಡಲಾಗಿದೆ. ನಗರದ ವ್ಯಾಪ್ತಿಯಲ್ಲಿ ಬಸ್, ಆಟೊ, ಟ್ಯಾಕ್ಸಿ ಸಂಚಾರಕ್ಕೆ ಅವಕಾಶ ಇಲ್ಲ ಎಂದು ಅವರು ಹೇಳಿದ್ದಾರೆ.

ಲಾಕ್‌ಡೌನ್ ಗುರುವಾರ ಬೆಳಿಗ್ಗೆ 7 ಗಂಟೆಯಿಂದ ಜಾರಿಯಾಗಿದ್ದು, ಜುಲೈ 12ರ ಬೆಳಿಗ್ಗೆ 7 ಗಂಟೆಯವರೆಗೆ ಜಾರಿಯಲ್ಲಿರುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ನವಿ ಮುಂಬೈ ಮತ್ತು ಪನ್ವೆಲ್ ನಗರಾಡಳಿತ ಸಂಸ್ಥೆಗಳು ಜುಲೈ 3ರ ಮಧ್ಯರಾತ್ರಿಯಿಂದ ಸಂಪೂರ್ಣ ಲಾಕ್‌ಡೌನ್ ಜಾರಿಗೊಳಿಸಲಿವೆ ಎಂದು ತಿಳಿದು ಬಂದಿದೆ.

ಥಾಣೆ ಜಿಲ್ಲಾ ವ್ಯಾಪ್ತಿಯಲ್ಲಿ ಬುಧವಾರ 1,322 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಇಲ್ಲಿಯವರೆಗೆ ಜಿಲ್ಲೆಯಲ್ಲಿ 34,646 ಜನರಲ್ಲಿ ಸೋಂಕು ಕಂಡು ಬಂದಿದ್ದು, 1,094 ಜನರು ಮೃತಪಟ್ಟಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.