ಶುಕ್ರವಾರ, 20 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ತ್ರಿಪುರಾ | ಪ್ರವಾಹ, ಭೂಕುಸಿತ: 10 ಮಂದಿ ಸಾವು

Published : 22 ಆಗಸ್ಟ್ 2024, 6:49 IST
Last Updated : 22 ಆಗಸ್ಟ್ 2024, 6:49 IST
ಫಾಲೋ ಮಾಡಿ
Comments

ಅಗರ್ತಲಾ: ತ್ರಿಪುರಾದಲ್ಲಿ ಭೂಕುಸಿತ ಮತ್ತು ಪ್ರವಾಹ ಸಂಬಂಧಿತ ಘಟನೆಗಳಲ್ಲಿ ಈವರೆಗೆ (ಭಾನುವಾರದಿಂದ–ಗುರುವಾರ) ಕನಿಷ್ಠ 10 ಜನ ಮೃತಪಟ್ಟಿದ್ದು, ಒಬ್ಬರು ನಾಪತ್ತೆಯಾಗಿದ್ದಾರೆ. 32,750 ಜನ 330 ಪರಿಹಾರ ಶಿಬಿರಗಳಲ್ಲಿ ಆಶ್ರಯ ಪಡೆದಿದ್ದಾರೆ ಎಂದು ಸರ್ಕಾರದ ಅಧಿಕೃತ ಪ್ರಕಟಣೆ ತಿಳಿಸಿದೆ.

ರಕ್ಷಣಾ ಕಾರ್ಯಾಚರಣೆಗೆ ನೆರವು ನೀಡುವಂತೆ ಮುಖ್ಯಮಂತ್ರಿ ಮಾಣಿಕ್ ಸಹಾ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮನವಿ ಮಾಡಿದ ಬಳಿಕ ನಾಲ್ಕು ಹೆಚ್ಚುವರಿ ಎನ್‌ಡಿಆರ್‌ಎಫ್ ತಂಡಗಳು ರಾಜ್ಯಕ್ಕೆ ಆಗಮಿಸಿವೆ.

ಭಾನುವಾರದಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ, ಎಲ್ಲಾ ಪ್ರಮುಖ ನದಿಗಳು ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿವೆ. ಹಲವಾರು ಪ್ರದೇಶಗಳಲ್ಲಿ ಪ್ರವಾಹ ಉಂಟಾಗಿದೆ. ರಾಜ್ಯದಲ್ಲಿ ಸುಮಾರು 1,900 ಭೂಕುಸಿತಗಳು ಸಂಭವಿಸಿದ್ದು, ರಸ್ತೆ ಸಂಚಾರಕ್ಕೆ ಅಡಚಣೆಯಾಗಿದೆ ಎಂದು ವರದಿಯಾಗಿದೆ.

ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್), ಎನ್‌ಡಿಆರ್‌ಎಫ್, ಅಸ್ಸಾಂ ರೈಫಲ್ಸ್ ಸೇರಿದಂತೆ ಕೇಂದ್ರ ಅರೆಸೇನಾ ಪಡೆಗಳು ವಿಪತ್ತು ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿವೆ.

ಗುರುವಾರ ಭಾರಿ ಮಳೆಯಾಗಲಿದ್ದು, ಪಶ್ಚಿಮ ತ್ರಿಪುರಾ ಮತ್ತು ಸೆಪಹಿಜಾಲಾ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT