ಕೊಲ್ಕತ್ತ: ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ ದಿನಾಜ್ಪುರ ಜಿಲ್ಲೆಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಯು(ಎನ್ಐಎ)ಎಂಬಿಬಿಎಸ್ ವಿದ್ಯಾರ್ಥಿಯನ್ನು ಬಂಧಿಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಹರಿಯಾಣದ ಅಲ್ ಫಲಾಹ್ ವಿಶ್ವವಿದ್ಯಾಲಯದ ಎಂಬಿಬಿಎಸ್ ವಿದ್ಯಾರ್ಥಿ ಮತ್ತು ಉತ್ತರ ದಿನಾಜ್ಪುರದ ದಲ್ಖೋಲಾ ಬಳಿಯ ಕೊನಾಲ್ ಗ್ರಾಮದ ನಿವಾಸಿ ಜಾನಿಸೂರ್ ಆಲಂ ಅಲಿಯಾಸ್ ನಿಸಾರ್ ಆಲಂ ಎಂದು ಗುರುತಿಸಲಾದ ಆರೋಪಿಯನ್ನು ಶುಕ್ರವಾರ ಬೆಳಿಗ್ಗೆ ಸುರ್ಜಾಪುರ ಬಜಾರ್ ಪ್ರದೇಶದಿಂದ ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.

‘ಬಂಧಿತ ಯುವಕ ಹರಿಯಾಣದ ಅಲ್ ಫಲಾಹ್ ವಿಶ್ವವಿದ್ಯಾಲಯದ ವೈದ್ಯಕೀಯ ವಿದ್ಯಾರ್ಥಿ. ಸಂಬಂಧಿಕರ ಮದುವೆಯಲ್ಲಿ ಪಾಲ್ಗೊಳ್ಳಲು ತನ್ನ ತಾಯಿ ಮತ್ತು ಸಹೋದರಿಯೊಂದಿಗೆ ತನ್ನ ಪೂರ್ವಜರ ಮನೆಗೆ ಪ್ರಯಾಣ ಬೆಳೆಸಿದ್ದ. ಮೊಬೈಲ್ ಟವರ್ ಆಧರಿಸಿ ಆತನ ಚಲನವಲನಗಳನ್ನು ಪತ್ತೆಹಚ್ಚಿದ ಎನ್ಐಎ ಅಧಿಕಾರಿಗಳು ನಂತರ ಬಂಧಿಸಿದ್ದಾರೆ’ಎಂದು ಅಧಿಕಾರಿ ಹೇಳಿದ್ದಾರೆ.

‘ಕೆಲವು ದಿನಗಳ ಹಿಂದೆ, ಕುಟುಂಬದ ಮದುವೆಯಲ್ಲಿ ಭಾಗವಹಿಸಲು ನಿಸಾರ್ ಪೂರ್ವಜರ ಮನೆಗೆ ಬಂದಿದ್ದ’ಎಂದು ಅಧಿಕಾರಿ ಹೇಳಿದ್ದಾರೆ.

ಇತ್ತೀಚೆಗೆ ನಡೆದ ದೆಹಲಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದ ಚಟುವಟಿಕೆಗಳಲ್ಲಿ ಆತನ ಪಾತ್ರದ ಬಗ್ಗೆ ಎನ್ಐಎ ಶಂಕಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಚಾರಣೆಯ ಸಮಯದಲ್ಲಿ ಅಲಂ ಪರಾರಿಯಾಗಲು ಯತ್ನಿಸಿದ್ದ ಎಂದು ತಿಳಿದುಬಂದಿದೆ. ನಂತರ ಆತನನ್ನು ವಶಕ್ಕೆ ಪಡೆಯಲಾಯಿತು ಎಂದು ಕೇಂದ್ರ ತನಿಖಾ ಸಂಸ್ಥೆಯ ಮೂಲವೊಂದು ತಿಳಿಸಿದೆ.

‘ದೆಹಲಿ ಸ್ಫೋಟಕ್ಕೂ ಆತನಿಗೂ ನೇರ ಸಂಬಂಧ ಇದೆಯೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಆತನ ಬಳಿ ಇದ್ದ ಡಿಜಿಟಲ್ ಸಾಧನಗಳು ಮತ್ತು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ’ಎಂದು ಅವರು ತಿಳಿಸಿದ್ದಾರೆ.

ಆರೋಪಿಯನ್ನು ಪ್ರಸ್ತುತ ಹೆಚ್ಚಿನ ವಿಚಾರಣೆ ಮತ್ತು ತನಿಖೆಗಾಗಿ ಸಿಲಿಗುರಿಗೆ ಕರೆದೊಯ್ಯಲಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.