ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಪಾಕಿಸ್ತಾನ ಗಡಿಯಲ್ಲಿ ಭಯೋತ್ಪಾದನೆ ಇನ್ನೂ ಜೀವಂತ: ಫಾರೂಕ್ ಅಬ್ದುಲ್ಲಾ

Published 11 ಜೂನ್ 2024, 12:27 IST
Last Updated 11 ಜೂನ್ 2024, 12:27 IST
ಅಕ್ಷರ ಗಾತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತೆಯು ಉತ್ತಮವಾಗಿದ್ದರೂ, ಪಾಕಿಸ್ತಾನದ ಗಡಿಯಿಂದ ಪ್ರವೇಶಿಸಿಲು ಸಾಧ್ಯತೆಗಳಿರುವುದರಿಂದ ಭಯೋತ್ಪಾದನೆ ಇನ್ನೂ ಜೀವಂತವಾಗಿದೆ ಎಂದು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಮಂಗಳವಾರ ಹೇಳಿದ್ದಾರೆ.

ಯಾತ್ರಾರ್ಥಿಗಳ ಮೇಲೆ ಉಗ್ರರ ದಾಳಿ ಸಂಬಂಧ ಪ್ರತಿಕ್ರಿಯಿಸಿದ ಅವರು, ಇಂತಹ ದಾಳಿಗಳನ್ನು ಖಂಡಿಸಬೇಕು. ಈ ಕೃತ್ಯ ಎಸೆಗಿದವರಿಗೆ ದೇವರು ನರಕಕ್ಕೆ ಕಳುಹಿಸಲಿ. ರಾಜ್ಯದಲ್ಲಿ ಭದ್ರತೆ ಉತ್ತಮವಾಗಿದ್ದರೂ ಈ ರೀತಿಯ ಘಟನೆ ನಡೆದಿರುವುದು ವಿಷಾದನೀಯ ಎಂದು ಹೇಳಿದ್ದಾರೆ

ಈ ವರ್ಷ ಪ್ರಾರಂಭವಾಗಲಿರುವ ಅಮರನಾಥ ಯಾತ್ರೆಗೆ ಸಿದ್ಧರಾಗಬೇಕು. ಈ ಬಾರಿಯೂ ಸೌಹಾರ್ದಯುತ ವಾತಾವರಣದಲ್ಲಿ ಯಾತ್ರೆ ನಡೆಯಲಿದೆ ಎಂದು ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ಪೋನಿ ಪ್ರದೇಶದ ತೇರ್ಯತ್ ಗ್ರಾಮದಲ್ಲಿ ಮಾತಾ ವೈಷ್ಣೋದೇವಿ ದೇವಾಲಯಕ್ಕೆ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಬಸ್‌ ಮೇಲೆ ಭಾನುವಾರ ಸಂಜೆ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ 10 ಮಂದಿ ಮೃತಪಟ್ಟಿದ್ದು, 33 ಜನರು ಗಾಯಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT