ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮು–ಕಾಶ್ಮೀರ: ಉಗ್ರರ ಅಡಗುತಾಣ ಪತ್ತೆ, ಶಸ್ತ್ರಾಸ್ತ್ರ ವಶ

Published 20 ಏಪ್ರಿಲ್ 2024, 12:23 IST
Last Updated 20 ಏಪ್ರಿಲ್ 2024, 12:23 IST
ಅಕ್ಷರ ಗಾತ್ರ

ಜಮ್ಮು: ಜಮ್ಮು–ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಶನಿವಾರ ಉಗ್ರರ ಅಡಗುತಾಣವನ್ನು ಪತ್ತೆ ಮಾಡಿ, ದಾಳಿ ನಡೆಸಿದ ಭದ್ರತಾ ಸಿಬ್ಬಂದಿ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡರು. 

‘ಉಗ್ರರು ಅವಿತಿರುವ ಬಗ್ಗೆ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಸ್ಥಳದಲ್ಲಿದ್ದ ಸ್ಫೋಟಕಗಳು ಮತ್ತು ಬಂದೂಕುಗಳನ್ನು ವಶಪಡಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

‘ಕಾರ್ಯಾಚರಣೆ ಮುಂದುವರಿದಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸುತ್ತಿದ್ದೇವೆ. ರಾಷ್ಟ್ರವಿರೋಧಿ ಕೃತ್ಯ ಎಸಗುವವರನ್ನು ಹಿಮ್ಮೆಟ್ಟಿಸಲು ಪೊಲೀಸ್‌ ಇಲಾಖೆ ಬದ್ಧವಾಗಿದೆ’ ಎಂದು ರಿಯಾಸಿಯ ಹಿರಿಯ ಪೊಲೀಸ್‌ ವರಿಷ್ಠಾಧಿಕಾರಿ ಮೊಹಿತ ಶರ್ಮ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT