ಪುಲ್ವಾಮಾ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಲಾರೋ-ಪರಿಗಮ್ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳು ಭಯೋತ್ಪಾದಕನನ್ನು ಹತ್ಯೆಗೈದಿದ್ದಾರೆ ಎಂದು ವರದಿ ತಿಳಿಸಿದೆ.
ತಡರಾತ್ರಿ ಎನ್‌ಕೌಂಟರ್ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಹತ್ಯೆಯಾದ ಭಯೋತ್ಪಾದಕನನ್ನು ಲಷ್ಕರ್-ಎ-ತೊಯ್ಬಾದ ಉನ್ನತ ಕಮಾಂಡರ್ ಎನ್ನಲಾಗಿದ್ದು, ಮೃತದೇಹ ಇನ್ನೂ ಪತ್ತೆಯಾಗಿಲ್ಲ.
ಪುಲ್ವಾಮಾದ ಲಾರೋ-ಪರಿಗಮ್ ಪ್ರದೇಶದಲ್ಲಿ ಎನ್‌ಕೌಂಟರ್ ಪ್ರಾರಂಭವಾಗಿದೆ. ಪೊಲೀಸ್ ಮತ್ತು ಭದ್ರತಾ ಪಡೆಗಳು ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ಕಾಶ್ಮೀರ ವಲಯ ಪೊಲೀಸರು ಎಕ್ಸ್ (ಟ್ವಿಟರ್) ನಲ್ಲಿ ತಿಳಿಸಿದ್ದಾರೆ.
ಉಗ್ರರೊಂದಿಗೆ ಗುಂಡಿನ ಚಕಮಕಿ ಸೋಮವಾರವೂ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.