ಶ್ರೀನಗರ: ‘ಜಮ್ಮು ಮತ್ತು ಕಾಶ್ಮೀರದ ಬುಡ್ಗಾಮ್ ಜಿಲ್ಲೆಯಲ್ಲಿ ಶನಿವಾರ ನಡೆದ ಎನ್ಕೌಂಟರ್ನಲ್ಲಿ ಒಬ್ಬ ಉಗ್ರ ಹತನಾಗಿದ್ದಾನೆ’ ಎಂದು ಪೊಲೀಸರು ತಿಳಿಸಿದರು.

‘ಬುಡ್ಗಾಮ್ ಜಿಲ್ಲೆಯ ಮೊಚುವಾ ಪ್ರದೇಶದಲ್ಲಿ ಉಗ್ರರು ಅಡಗಿರುವ ನಿಖರ ಮಾಹಿತಿ ಮೇರೆಗೆ ಭದ್ರತಾ ಪಡೆ ಶೋಧ ಕಾರ್ಯಾಚರಣೆ ನಡೆಸಿತು. ಈ ವೇಳೆ ಉಗ್ರರು ಮೊದಲು ಗುಂಡಿನ ದಾಳಿ ನಡೆಸಿದ್ದು, ಇದಕ್ಕೆ ಪ್ರತಿಯಾಗಿ ಭದ್ರತಾ ಪಡೆಯು ಗುಂಡು ಹಾರಿಸಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

‘ಈ ಗುಂಡಿನ ಚಕಮಕಿಯಲ್ಲಿ ಉಗ್ರನೊಬ್ಬ ಮೃತಪಟ್ಟಿದ್ದಾನೆ. ಘಟನಾ ಸ್ಥಳದಿಂದ ಎಕೆ ರೈಫಲ್ ಮತ್ತು ಪಿಸ್ತೂಲ್ ಅನ್ನು ವಶಕ್ಕೆ ಪಡೆಯಲಾಗಿದೆ. ಈತ ಯಾವ ಸಂಘಟನೆಯ ಸದಸ್ಯ ಎಂಬುದರ ಬಗ್ಗೆ ಪತ್ತೆ ಹಚ್ಚಲಾಗುತ್ತಿದೆ’ ಎಂದು ಹೇಳಿದರು.

‘ಕಾರ್ಯಾಚರಣೆ ವೇಳೆ ತಪ್ಪಿಸಿಕೊಂಡಿದ್ದ ಮತ್ತೊಬ್ಬ ಉಗ್ರನನ್ನು ಪುಲ್ವಾಮದ ಖ್ರೆವ್ ಪ್ರದೇಶದಲ್ಲಿ ಬಂಧಿಸಲಾಗಿದೆ. ಆತನನ್ನು ಟ್ರಕ್ ಚಾಲಕನೊಬ್ಬ ಮೊಚುವಾದಿಂದ ಖ್ರೆವ್ಗೆ ಕರೆದುಕೊಂಡು ಹೋಗಿದ್ದ. ಟ್ರಕ್ನಲ್ಲಿ ಪಿಸ್ತೂಲ್ ಮತ್ತು ಗ್ರೆನೇಡ್ಗಳು ಸಿಕ್ಕಿವೆ. ಈ ಹಿನ್ನೆಲೆಯಲ್ಲಿ ಚಾಲಕನನ್ನು ಕೂಡ ಬಂಧಿಸಲಾಗಿದೆ’ ಎಂದು ಕಾಶ್ಮೀರ ವಲಯದ ಐಜಿಪಿ ವಿಜಯ್ ಕುಮಾರ್ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.