ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಅಂತರರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನ ಅಪ್ರಚೋದಿತ ಗುಂಡಿನ ದಾಳಿಯನ್ನು ಮುಂದುವರಿಸಿದೆ. ಇದಕ್ಕೆ ಪ್ರತಿಯಾಗಿ ಉಗ್ರರ ಲಾಂಚ್ಪ್ಯಾಡ್ ಅನ್ನು ಸಂಪೂರ್ಣವಾಗಿ ನಾಶಪಡಿಸಲಾಗಿದೆ ಎಂದು ಗಡಿ ಭದ್ರತಾ ಪಡೆ (ಬಿಎಸ್ಎಫ್) ಶನಿವಾರ ತಿಳಿಸಿದೆ.

ಪಾಕಿಸ್ತಾನದ ಸಿಯಾಲ್ಕೋಟ್ ಜಿಲ್ಲೆಯ ಲೂನಿಯಲ್ಲಿ ಉಗ್ರರ ನೆಲೆ ಇತ್ತು ಎಂದು ಬಿಎಸ್ಎಫ್ ವಕ್ತಾರರು ತಿಳಿಸಿದ್ದಾರೆ.

ಶುಕ್ರವಾರ ರಾತ್ರಿ 9 ಗಂಟೆಯಿಂದ ಜಮ್ಮು ವಲಯದಲ್ಲಿರುವ ಬಿಎಸ್ಎಫ್ ಪೋಸ್ಟ್ಗಳ ಮೇಲೆ ಪಾಕಿಸ್ತಾನ ಅಪ್ರಚೋದಿತ ಗುಂಡಿನ ದಾಳಿ ನಡೆಸಿತ್ತು. ಇದಕ್ಕೆ ನಾವು ತಕ್ಕ ಉತ್ತರ ಕೊಟ್ಟಿದ್ದೇವೆ ಎಂದು ಬಿಎಸ್ಎಫ್ ವಕ್ತಾರರು ಹೇಳಿದ್ದಾರೆ.

ದಾಳಿಯಿಂದಾಗಿ ಅಂತರರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನ ರೇಂಜರ್ಗಳ ಶಿಬಿರಗಳಿಗೆ ಹೆಚ್ಚು ಹಾನಿಯಾಗಿದೆ. ಭಾರತದ ಸಾರ್ವಭೌಮತ್ವವನ್ನು ರಕ್ಷಿಸುವ ನಮ್ಮ ಸಂಕಲ್ಪ ಅಚಲವಾಗಿದೆ ಎಂದು ವಕ್ತಾರರು ತಿಳಿಸಿದ್ದಾರೆ.

ಏಪ್ರಿಲ್ 22ರಂದು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯಲ್ಲಿ 26 ಪ್ರವಾಸಿಗರು ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ಭಾರತದ ಸಶಸ್ತ್ರ ಪಡೆಗಳು ‘ಆಪರೇಷನ್ ಸಿಂಧೂರ’ದ ಮೂಲಕ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿತ್ತು. ಇದರ ಬೆನ್ನಲ್ಲೇ ಗಡಿಯಲ್ಲಿ ಎರಡೂ ದೇಶಗಳ ನಡುವೆ ಸೇನಾ ಸಂಘರ್ಷ ತೀವ್ರಗೊಂಡಿದೆ.

ಜಮ್ಮು ಮತ್ತು ಕಾಶ್ಮೀರದಿಂದ ಗುಜರಾತ್ವರೆಗಿನ ಭಾರತದ 26 ಸ್ಥಳಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ಶುಕ್ರವಾರ ರಾತ್ರಿ ಡ್ರೋನ್ ದಾಳಿ ನಡೆಸಿದೆ. ವಿಮಾನ ನಿಲ್ದಾಣಗಳು, ವಾಯುನೆಲೆಗಳು ಸೇರಿದಂತೆ ಪ್ರಮುಖ ಕಟ್ಟಡಗಳನ್ನು ಹೊಡೆಯುವ ಶತ್ರುಗಳ ಪ್ರಯತ್ನಗಳನ್ನು ವಿಫಲಗೊಳಿಸಲಾಗಿದೆ ಎಂದು ರಕ್ಷಣಾ ಸಚಿವಾಲಯ ಹೇಳಿದೆ.
.Ind-Pak Tensions | ಪಾಕ್ ಡ್ರೋನ್ಗಳನ್ನು ಹೊಡೆದುರುಳಿಸಿದ ಭಾರತೀಯ ಸೇನೆ.Fact Check | ಭಾರತೀಯ ಸೈನಿಕರು ಶಿಬಿರ ತೊರೆಯುತ್ತಿದ್ದಾರೆ ಎಂಬುದು ಸುಳ್ಳು.ಪಾಕಿಸ್ತಾನದ ಮಿಲಿಟರಿ ಪೋಸ್ಟ್, ಡ್ರೋನ್ ಲಾಂಚ್ಪ್ಯಾಡ್ ಧ್ವಂಸಗೊಳಿಸಿದ ಭಾರತ.ಪಾಕ್ ದಾಳಿ: ರಜೌರಿಯ ಹೆಚ್ಚುವರಿ ಜಿಲ್ಲಾಧಿಕಾರಿ ಸಾವು, ಇಬ್ಬರಿಗೆ ಗಂಭೀರ ಗಾಯ.Ind-Pak Tensions: ಸಂಪಾದಕರನ್ನು ಭೇಟಿಯಾಗಿ ವಾಸ್ತವ ವರದಿ ಪ್ರಕಟಿಸಿ ಎಂದ ಸಚಿವ.ಭಯೋತ್ಪಾದನೆ ವಿರುದ್ಧ ಜಗತ್ತು ಸ್ವಲ್ಪವೂ ಸಹಿಷ್ಣು ಆಗಬೇಕಿಲ್ಲ: ಎಸ್.ಜೈಶಂಕರ್.Ind - Pak Tensions: ಮೇ 15ರವರೆಗೆ 32 ವಿಮಾನ ನಿಲ್ದಾಣಗಳ ಕಾರ್ಯಾಚರಣೆ ಸ್ಥಗಿತ.Ind-Pak Tensions |ಪಾಕ್ನ 3 ವಾಯುನೆಲೆಗಳನ್ನು ಗುರಿಯಾಗಿಸಿ ಭಾರತ ಕ್ಷಿಪಣಿ ದಾಳಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.