ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಶ್ಮೀರ: ಉಗ್ರರ ಅಡಗುತಾಣ ಭೇದಿಸಿದ ಸೇನೆ

Published 3 ಮೇ 2024, 16:31 IST
Last Updated 3 ಮೇ 2024, 16:31 IST
ಅಕ್ಷರ ಗಾತ್ರ

ಶ್ರೀನಗರ: ಜಮ್ಮು–ಕಾಶ್ಮೀರದ ಬಂಡಿಪೊರಾ ಜಿಲ್ಲೆಯಲ್ಲಿ ಶುಕ್ರವಾರ ಕಾರ್ಯಾಚರಣೆ ನಡೆಸಿರುವ ಭದ್ರತಾ ಪಡೆಗಳು, ಉಗ್ರರ ಅಡಗುತಾಣವೊಂದನ್ನು ಭೇದಿಸಿ, ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿವೆ.

‘ಸೇನೆಯ 13–ಆರ್‌ಆರ್‌, ಬಂಡಿಪೊರಾ ಪೊಲೀಸರು ಹಾಗೂ ಸಿಆರ್‌ಪಿಎಫ್‌ನ 3ನೇ ಬೆಟಾಲಿಯನ್ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ, ಜಿಲ್ಲೆಯ ಚಂಗಲಿ ಅರಣ್ಯ ಪ್ರದೇಶದಲ್ಲಿದ್ದ ಉಗ್ರರ ಅಡಗುತಾಣವನ್ನು ಭೇದಿಸಲಾಗಿದೆ’ ಎಂದು ಬಂಡಿಪೊರಾ ಪೊಲೀಸರು ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿದ್ದಾರೆ.

‘ಎರಡು ರೈಫಲ್‌ಗಳು, ನಾಲ್ಕು ಮ್ಯಾಗಜಿನ್‌ ಹಾಗೂ ಇತರ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ’ ಎಂದೂ ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT