ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಯೋತ್ಪಾದಕರ ಸಂಖ್ಯೆ ಕ್ಷೀಣ: ಸಿಆರ್‌ಪಿಎಫ್‌ ಮಹಾನಿರ್ದೇಶಕ

Last Updated 9 ಸೆಪ್ಟೆಂಬರ್ 2018, 13:47 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ):‘ಕಾಶ್ಮೀರ ಕಣಿವೆಯಲ್ಲಿ ಭದ್ರತಾ ಪಡೆಗಳ ಸತತ ಕಾರ್ಯಾಚರಣೆಯಿಂದ ಭಯೋತ್ಪಾದಕರ ಸಂಖ್ಯೆ ಕ್ಷೀಣಿಸುತ್ತಿದೆ. ಎರಡು ವರ್ಷಗಳಲ್ಲಿ 360 ಭಯೋತ್ಪಾದಕರನ್ನು ಕೊಲ್ಲಲಾಗಿದೆ’ ಎಂದು ಸಿಆರ್‌ಪಿಎಫ್‌ ಮಹಾನಿರ್ದೇಶಕರಾಜೀವ್ ರಾಯ್ ಭಟ್ನಾಗರ್ ತಿಳಿಸಿದ್ದಾರೆ.

‘ಸ್ಥಳೀಯ ಯುವಕರ ದಾರಿ ತಪ್ಪಿಸಿ ಭಯೋತ್ಪಾದಕ ಕೃತ್ಯದಲ್ಲಿ ತೊಡಗಿಸಿಕೊಳ್ಳಲಾಗುತ್ತಿದೆ. ಯುವಕರು ಶಸ್ತ್ರಾಸ್ತ್ರಗಳನ್ನು ಕೈಗೆತ್ತುಕೊಳ್ಳದಂತೆ ತಡೆಯಲು ಭದ್ರತಾ ಪಡೆಗಳು ಅವಿತರವಾಗಿ ಪ್ರಯತ್ನಿಸುತ್ತಿವೆ’ ಎಂದು ತಿಳಿಸಿದರು.

‘ಭಯೋತ್ಪಾದನೆಯ ಶಮನವನ್ನು ಸವಾಲಾಗಿ ಸ್ವೀಕರಿಸಿದ್ದೇವೆ. ಭಯೋತ್ಪಾದನೆಯಲ್ಲಿ ತೊಡಗಿಸಿಕೊಂಡವರ ಮನ ವೊಲಿಸಲು ಪ್ರಯತ್ನಿಸುತ್ತಿದ್ದೇವೆ. ಬಂದೂಕಿನಿಂದ ಉದ್ದೇಶದ ಸಾಧನೆ ಸಾಧ್ಯವಿಲ್ಲ ಎಂದು ಅವರಿಗೂ ಅರಿವಾಗಿದೆ.ಹಲವರು ಶರಣಾಗಿದ್ದಾರೆ’ ಎಂದು ಹೇಳಿದ್ದಾರೆ.

‘ಕಾಶ್ಮೀರಿ ಕಣಿವೆಯಲ್ಲಿ ಅರವತ್ತು ಬೆಟಾಲಿಯನ್‌ಗಳನ್ನು ನಿಯೋಜಿಸಲಾಗಿದೆ. ನಾವೊಂದು ತಂಡವಾಗಿ ಕೆಲಸ ಮಾಡುತ್ತಿದ್ದೇವೆ.ಇದರಿಂದ ಅದ್ಭುತ ಫಲಿತಾಂಶ ದೊರಕಿದೆ.ಈ ವರ್ಷ 142 ಭಯೋತ್ಪಾದಕರು ತಟಸ್ಥರಾಗಿದ್ದರು. ಕಳೆದ ವರ್ಷ 220 ಭಯೋತ್ಪಾದಕರನ್ನು ಕೊಲ್ಲಲಾಗಿದೆ. ಭದ್ರತಾ ಸವಾಲುಗಳನ್ನು ಗಮನದಲ್ಲಿರಿಸಿಕೊಂಡು ಸಿಆರ್‌ಪಿಎಫ್‌ ಪಡೆಗೆ ಹೆಚ್ಚಿನ ಸುರಕ್ಷತೆ ಒದಗಿಸಲಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT