ಮುಂಬೈ: ಮಹಾರಾಷ್ಟ್ರದ ಠಾಣೆಯಲ್ಲಿ ಪಹಲ್ಗಾಮ್ ಮಾದರಿಯ ದಾಳಿ ನಡೆದಿದ್ದು, ವ್ಯಕ್ತಿಯೊಬ್ಬ ಇಬ್ಬರು ಭದ್ರತಾ ಸಿಬ್ಬಂದಿಗೆ ಚಾಕುವಿನಿಂದ ಇರಿದಿದ್ಧಾನೆ.

ಅಮೆರಿಕದಿಂದ ವಾಪಸಾಗಿರುವ ವ್ಯಕ್ತಿಯೊಬ್ಬ ಸೆಕ್ಯೂರಿಟಿ ಬಳಿ ಧರ್ಮ ಯಾವುದೆಂದು ವಿಚಾರಿಸಿ ದಾಳಿ ನಡೆಸಿದ್ದಾನೆ ಎಂದು ವರದಿ ತಿಳಿಸಿದೆ. ಆತನ ಮನೆಯಲ್ಲಿ 'ಒಂಟಿ ತೋಳ' ದಾಳಿ ಮತ್ತು ಇಸ್ಲಾಮಿಕ್ ಸ್ಟೇಟ್ ಬಗ್ಗೆ ಉಲ್ಲೇಖಗಳಿರುವ ಟಿಪ್ಪಣಿಗಳನ್ನು ತನಿಖಾಧಿಕಾರಿಗಳು ಪತ್ತೆ ಮಾಡಿದ್ದಾರೆ. ಭಯೋತ್ಪಾದನೆ ನಿಗ್ರಹ ದಳವು ಈ ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡಿದೆ.

ಘಟನೆಯ ನಂತರ ಬಂಧಿಸಲ್ಪಟ್ಟ ಆರೋಪಿ 'ಸ್ವಯಂಪ್ರೇರಿತವಾಗಿ ಮೂಲಭೂತವಾದ'ಕ್ಕೆ ಒಳಗಾಗಿದ್ದಾನೆ ಎಂದು ಮುಖ್ಯಮಂತ್ರಿ ದೇವೇಂದ್ರ ಫಡಣವೀವಿಸ್ ಹೇಳಿದ್ದಾರೆ.

ಈ ಪ್ರಕರಣವು ಕಳೆದ ವರ್ಷ ನಡೆದ ಪಹಲ್ಗಾಮ್ ದಾಳಿಯನ್ನು ಹೋಲುತ್ತಿದೆ. ದಾಳಿಕೋರನನ್ನು ಜೈಬ್ ಜುಬೈರ್ ಅನ್ಸಾರಿ ಎಂದು ಗುರುತಿಸಲಾಗಿದ್ದು, 'ಕಲ್ಮಾ' ಪಠಿಸಲು ಭದ್ರತಾ ಸಿಬ್ಬಂದಿಗೆ ಸೂಚಿಸಿದ್ದಾನೆ. ಅವರು ನಿರಾಕರಿಸಿದಾಗ ಇಬ್ಬರಿಗೂ ಚಾಕುವಿನಿಂದ ಇರಿದಿದ್ದಾರೆ ಎಂದು ರಾಜ್ಯ ಭಯೋತ್ಪಾದನಾ ನಿಗ್ರಹ ದಳದ(ಎಟಿಎಸ್) ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ಈ ಸಂಬಂಧ ಭಾರತೀಯ ನ್ಯಾಯ ಸಂಹಿತೆಯ(ಬಿಎನ್ಎಸ್) ವಿವಿಧ ಸೆಕ್ಷನ್ಗಳಡ ನಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇದರಲ್ಲಿ ಕೊಲೆ ಯತ್ನಕ್ಕೆ ಸಂಬಂಧಿಸಿದ ಸೆಕ್ಷನ್ಗಳೂ ಸೇರಿವೆ.

‘ಘಟನೆಯ ಗಂಭೀರತೆ ಮತ್ತು ವ್ಯಾಪ್ತಿಯನ್ನು ಗಮನದಲ್ಲಿಟ್ಟುಕೊಂಡು, ಹೆಚ್ಚಿನ ತನಿಖೆ ನಡೆಸಲು ಮಹಾರಾಷ್ಟ್ರ ಎಟಿಎಸ್ ಪ್ರಕರಣವನ್ನು ವಹಿಸಿಕೊಂಡಿದೆ. ಒಂಟಿ ತೋಳ ದಾಳಿ ಮತ್ತು ಇಸ್ಲಾಮಿಕ್ ಸ್ಟೇಟ್ ಅನ್ನು ಉಲ್ಲೇಖಿಸುವ ಟಿಪ್ಪಣಿ, ಲ್ಯಾಪ್ಟಾಪ್ ಹಾಗೂ ಕುರಾನ್ನ ಮೂರು ಪ್ರತಿಗಳನ್ನು ವಶಪಡಿಸಿಕೊಳ್ಳಲಾಗಿದೆ’ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.