ಗುರುವಾರ, 23 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

LS Polls 2024 | ‘ಸುಳ್ಳು ಪ್ರಚಾರ’: ತರೂರ್ ವಿರುದ್ಧ ಪ್ರಕರಣ

Published 21 ಏಪ್ರಿಲ್ 2024, 14:32 IST
Last Updated 21 ಏಪ್ರಿಲ್ 2024, 14:32 IST
ಅಕ್ಷರ ಗಾತ್ರ

ತಿರುವನಂತಪುರ: ಕಾಂಗ್ರೆಸ್‌ ಮುಖಂಡ ಹಾಗೂ ತಿರುವನಂತಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಶಶಿ ತರೂರ್ ಅವರು ತಮ್ಮ ಪ್ರತಿಸ್ಪರ್ಧಿಯಾದ ಬಿಜೆಪಿಯ ರಾಜೀವ್ ಚಂದ್ರಶೇಖರ್ ವಿರುದ್ಧ ಸುಳ್ಳು ಪ್ರಚಾರ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಏಪ್ರಿಲ್ 15ರಂದೇ ಸೈಬರ್ ಪೊಲೀಸರು ಪ್ರಕರಣ ದಾಖಲಿಸಿದ್ದರು. ಶಶಿ ತರೂರ್ ಅವರು ಟಿ.ವಿ ಕಾರ್ಯಕ್ರಮವೊಂದರಲ್ಲಿ ರಾಜೀವ್ ಚಂದ್ರಶೇಖರ್ ವಿರುದ್ಧ ಸುಳ್ಳು ಪ್ರಚಾರ ಮಾಡಿದ್ದರು ಎಂದು ಬಿಜೆಪಿ ಮುಖಂಡ ಜೆ.ಆರ್.ಪದ್ಮಕುಮಾರ್ ನೀಡಿದ್ದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ.

ತರೂರ್ ಅವರು ಲೋಕಸಭಾ ಚುನಾವಣೆಯಲ್ಲಿ ಕರಾವಳಿಯ ಮತದಾರರನ್ನು ಪ್ರಭಾವಿಸುವ ಸಂಬಂಧ ರಾಜೀವ್ ಚಂದ್ರಶೇಖರ್ ವಿರುದ್ಧ ಮಾನಹಾನಿಕರ ಹೇಳಿಕೆ ನೀಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT