ದೆಹಲಿಯಲ್ಲಂತೂ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಸಂಸತ್ ಭವನ ಸೇರಿದಂತೆ ಸರ್ಕಾರಿ ಕಟ್ಟಡಗಳು ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುತ್ತಿವೆ.

ಈ ತುಕಡಿಯಲ್ಲಿ ಸಂಪೂರ್ಣ ಮಹಿಳಾ ಪೊಲೀಸರು ಕರ್ತವ್ಯ ಪಥದಲ್ಲಿ ಹೆಜ್ಜೆ ಹಾಕಲಿದ್ದಾರೆ. ಲಿಂಗ ಸಮಾನತೆ ಮತ್ತು ಮಹಿಳಾ ಸಬಲೀಕರಣ ಥೀಮ್ ಅಡಿ 194 ಮಹಿಳಾ ಪೊಲೀಸರು ಪರೇಡ್ ಮಾಡಲಿದ್ದು, ಐಪಿಎಸ್ ಅಧಿಕಾರಿ ಶ್ವೇತಾ ಕೆ. ಸುಗತನ್ ಅವರು ಈ ಪಡೆಯನ್ನ ಮುನ್ನಡೆಸಲಿದ್ದಾರೆ.

ಗಣರಾಜ್ಯೋತ್ಸವ ದಿನವಾದ ಇಂದು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ದೆಹಲಿ ಪೊಲೀಸರು ಕಟ್ಟುನಿಟ್ಟಿನ ಭದ್ರತೆ ಕೈಗೊಂಡಿದ್ದಾರೆ.

ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯಲ್ ಮ್ಯಾಕ್ರಾನ್ 75ನೇ ಗಣರಾಜ್ಯೋತ್ಸವ ಮುಖ್ಯ ಅತಿಥಿಯಾಗಿದ್ದಾರೆ. ಇದಲ್ಲದೆ ದೇಶ ವಿದೇಶಗಳ 13 ಸಾವಿರ ಅತಿಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಒಟ್ಟು 70 ಸಾವಿರ ಆಸನದ ವ್ಯವಸ್ಥೆ ಮಾಡಲಾಗಿದೆ. ಇದರಲ್ಲಿ ಸಾರ್ವಜನಿಕರಿಗಾಗಿ 42 ಸಾವಿರ ಆಸನಗಳನ್ನು ಮೀಸಲಿರಿಸಲಾಗಿದೆ.

ಗಣರಾಜ್ಯೋತ್ಸವಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ದೇಶದ ಜನರಿಗೆ ಶುಭಕೋರಿದ್ದಾರೆ.

40 ವರ್ಷದ ಬಳಿಕ ಕರ್ತವ್ಯ ಪಥದಲ್ಲಿ ಸಾರೋಟಿನಲ್ಲಿ ರಾಷ್ಟ್ರಪತಿ ಬಂದಿಳಿದಿದ್ದಾರೆ.

ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ಮುರ್ಮು, ಫ್ರಾನ್ಸ್ ಅಧ್ಯಕ್ಷರಿಗೆ ಸೇನಾ ಗೌರವ ಸಲ್ಲಿಸಲಾಯಿತು.

ಈ ತುಕಡಿಯಲ್ಲಿ ಸಂಪೂರ್ಣ ಮಹಿಳಾ ಪೊಲೀಸರು ಕರ್ತವ್ಯ ಪಥದಲ್ಲಿ ಹೆಜ್ಜೆ ಹಾಕಿದ್ದಾರೆ. ಲಿಂಗ ಸಮಾನತೆ ಮತ್ತು ಮಹಿಳಾ ಸಬಲೀಕರಣ ಥೀಮ್ ಅಡಿ 194 ಮಹಿಳಾ ಪೊಲೀಸರು ಪರೇಡ್ ಮಾಡಿದ್ದು ಐಪಿಎಸ್ ಅಧಿಕಾರಿ ಶ್ವೇತಾ ಕೆ. ಸುಗತನ್ ಈ ಪಡೆಯನ್ನ ಮುನ್ನಡೆಸಿದರು.

ಗಣರಾಜ್ಯೋತ್ಸವದಲ್ಲಿ 16 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳು, 9 ಸಚಿವಾಲಯಗಳು, ವಿವಿಧ ಸಂಸ್ಥೆಗಳ 25 ಸ್ತಬ್ಧಚಿತ್ರಗಳ ಪ್ರದರ್ಶನ ಮಾಡಲಾಯಿತು. ಈ ಬಾರಿ ಗಣರಾಜ್ಯೋತ್ಸವದಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಅವಕಾಶ ಇರಲಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.