ಗುರುವಾರ, 28 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಥಾಣೆ: ಸಹಜೀವನ ಸಂಗಾತಿಯನ್ನು ಕೊಂದು 12 ತುಂಡುಗಳಾಗಿ ಕತ್ತರಿಸಿ ಕುಕ್ಕರಲ್ಲಿ ಬೇಯಿಸಿದ!

Published 8 ಜೂನ್ 2023, 4:35 IST
Last Updated 8 ಜೂನ್ 2023, 4:35 IST
ಅಕ್ಷರ ಗಾತ್ರ

ಮುಂಬೈ: ವ್ಯಕ್ತಿಯೊಬ್ಬ ತನ್ನ ಸಹಜೀವನ ಸಂಗಾತಿ ಮಹಿಳೆಯನ್ನು ಕೊಂದು ಮೃತದೇಹವನ್ನು ತುಂಡುಗಳಾಗಿ ಕತ್ತರಿಸಿ ಕುಕ್ಕರ್‌ನಲ್ಲಿ ಬೇಯಿಸಿರುವ ಪ್ರಕರಣ ಮಹಾರಾಷ್ಟ್ರದ ಥಾಣೆಯಲ್ಲಿ ಬಯಲಾಗಿದೆ.

ಹತ್ಯೆಗೀಡಾದ ಮಹಿಳೆಯನ್ನು ಸರಸ್ವತಿ ವೈದ್ಯ(32) ಎಂದು ಗುರುತಿಸಲಾಗಿದ್ದು, ಆರೋಪಿಯನ್ನು 56 ವರ್ಷದ ಮನೋಜ್ ಸಹಾನಿ ಎಂದು ಗುರುತಿಸಲಾಗಿದೆ.

3–4 ದಿನಗಳ ಹಿಂದೆ ಸರಸ್ವತಿಯನ್ನು ಕೊಂದಿದ್ದ ಮನೋಜ್, ಟ್ರೀ ಕಟ್ಟರ್ ಅನ್ನು ಖರೀದಿಸಿ ಆಕೆಯ ದೇಹವನ್ನು 12–13 ತುಂಡು ಮಾಡಿದ್ದ. ಬಳಿಕ, ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಿ, ಹೊರಗೆ ಎಸೆಯುವ ಉದ್ದೇಶದಿಂದ ಪ್ಲಾಸ್ಟಿಕ್ ಪೇಪರ್‌ನಲ್ಲಿ ಸುತ್ತಿ ಇಟ್ಟಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಸರಸ್ವತಿ ವೈದ್ಯ ಮತ್ತು ಮನೋಜ್ ಸಹಾನಿ 3 ವರ್ಷಗಳಿಂದ ಈ ಜೋಡಿ ಫ್ಲ್ಯಾಟ್‌ನಲ್ಲಿ ವಾಸವಿತ್ತು ಎಂದು ನಯಾನಗರ್ ಪೊಲೀಸರು ತಿಳಿಸಿರುವುದಾಗಿ ‘ಇಂಡಿಯಾ ಟುಡೆ’ವರದಿ ಮಾಡಿದೆ.

ಫ್ಲ್ಯಾಟ್‌ನಲ್ಲಿ ಕೆಟ್ಟ ವಾಸನೆ ಬರುತ್ತಿರುವುದನ್ನು ಗಮನಿಸಿದ ನೆರೆಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಬಂದ ಪೊಲೀಸ್ ತಂಡ ಪರಿಶೀಲನೆ ನಡೆಸಿದಾಗ ಸರಸ್ವತಿ ಅವರ ಕೊಳೆತ ಮೃತದೇಹ ಕಂಡುಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT