ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಳ್ಳಬಟ್ಟಿ ದುರಂತದಲ್ಲಿ 14 ಮಂದಿ ಸಾವು: ಪ್ರಕರಣ ಸಿಐಡಿ ತನಿಖೆಗೆ ವಹಿಸಿದ ಸ್ಟಾಲಿನ್

Published 15 ಮೇ 2023, 13:16 IST
Last Updated 15 ಮೇ 2023, 13:16 IST
ಅಕ್ಷರ ಗಾತ್ರ

ವಿಲ್ಲುಪುರ (ತಮಿಳುನಾಡು): ಕಳ್ಳಬಟ್ಟಿ ಮದ್ಯ ಕುಡಿದು ಐವರ ಸಾವು ಪ್ರಕರಣವನ್ನು ಸಿಬಿ–ಸಿಐಡಿ ತನಿಖೆಗೆ ವಹಿಸುವುದಾಗಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ವಿಲ್ಲುಪುರ ಜಿಲ್ಲೆಯಲ್ಲಿ ಒಂಬತ್ತು ಮತ್ತು ಚೆಂಗಲ್‌ಪಟ್ಟು ಜಿಲ್ಲೆಯಲ್ಲಿ ಐವರು ಸಾವನ್ನಪ್ಪಿದ್ದಾರೆ. ನಕಲಿ ಮದ್ಯ ತಯಾರಿಸಲು ಮೆಥನಾಲ್ ಬಳಸಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ’ ಎಂದು ಸ್ಟಾಲಿನ್ ಹೇಳಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಇಬ್ಬರು ಇನ್ಸ್‌ಪೆಕ್ಟರ್‌ಗಳೂ ಸೇರಿದಂತೆ ನಾಲ್ವರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಮೃತರ ಕುಟುಂಬಕ್ಕೆ ತಲಾ ₹10 ಲಕ್ಷ ಹಾಗೂ ಚಿಕಿತ್ಸೆ ಪಡೆಯುತ್ತಿರುವವರಿಗೆ ತಲಾ ₹50 ಸಾವಿರ ಪರಿಹಾರ ನೀಡುವುದಾಗಿ ಸ್ಟಾಲಿನ್ ಘೋಷಿಸಿದ್ದಾರೆ. ಮೃತರು ಸುಮಾರು 45ರಿಂದ 55 ವರ್ಷದವರಾಗಿದ್ದಾರೆ.

‘ಪ್ರಕರಣ ದಾಖಲಾಗಿದ್ದು, ವಿಷಯುಕ್ತ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ತಿಳಿದ್ದಾರೆ.

ವಿರೋಧ ಪಕ್ಷಗಳಾದ ಎಐಎಡಿಎಂಕೆ ಹಾಗೂ ಪಿಎಂಕೆ, ಸ್ಟಾಲಿನ್‌ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿವೆ. ‘ಅಕ್ರಮ ಮದ್ಯ ತಯಾರಿಕೆ ದಂಧೆ ವಿರುದ್ಧ ಈಗಲಾದರೂ ಕ್ರಮ ಕೈಗೊಳ್ಳಿ’ ಎಂದು ಆಗ್ರಹಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT