ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ ದ್ವೇಷ ಭಾಷಣ ಆರೋಪ: ಚುನಾವಣಾ ಆಯೋಗದಿಂದ ಪರಿಶೀಲನೆ

Published 23 ಏಪ್ರಿಲ್ 2024, 16:28 IST
Last Updated 23 ಏಪ್ರಿಲ್ 2024, 16:28 IST
ಅಕ್ಷರ ಗಾತ್ರ

ನವದೆಹಲಿ: ದ್ವೇಷ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಿವಿಧ ಪಕ್ಷಗಳ ಪ್ರತಿನಿಧಿಗಳು, ಸಾಮಾಜಿಕ ಸಂಘಟನೆಗಳು ಅನೇಕ ದೂರುಗಳನ್ನು ಸಲ್ಲಿಸಿದ್ದು, ಚುನಾವಣಾ ಆಯೋಗವು ಅವುಗಳ ಪರಿಶೀಲನೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ಕಾಂಗ್ರೆಸ್, ಸಿಪಿಎಂ, ಸಿಪಿಐ ಮತ್ತು ಸಿಪಿಐ (ಎಂಎಲ್‌) ಹಾಗೂ ‘ನಾಗರಿಕ ಸ್ವಾತಂತ್ರ‍್ಯಕ್ಕಾಗಿ ಜನರ ಒಕ್ಕೂಟ’ (ಪಿಯುಸಿಎಲ್‌) ಸೇರಿದಂತೆ ಹಲವು ಸಂಘಟನೆಗಳು ಆಯೋಗಕ್ಕೆ ಮತ್ತು ಪೊಲೀಸರಿಗೆ ದೂರುಗಳನ್ನು ಸಲ್ಲಿಸಿದ್ದು, ಎಫ್‌ಐಆರ್‌ ದಾಖಲಿಸುವಂತೆ ಆಗ್ರಹಿಸಿವೆ.   

‘ಸಂವಿಧಾನ್ ಬಚಾವೋ ನಾಗರಿಕ್ ಅಭಿಯಾನ್’ ಪ್ರಧಾನಿ ಮೋದಿ ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ 17,421 ಜನರಿಂದ ಸಹಿ ಸಂಗ್ರಹಿಸಿದ್ದು, ಅದನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಿದೆ. ಸಂಯುಕ್ತ ಕಿಸಾನ್ ಮೋರ್ಚಾ ಕೂಡ ದ್ವೇಷ ಭಾಷಣದ ಸಂಬಂಧ ಪ್ರಧಾನಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದು, ಆರು ವರ್ಷ ಅವರು ಚುನಾವಣೆಗೆ ಸ್ಪರ್ಧಿಸದಂತೆ ನಿಷೇಧ ಹೇರಬೇಕೆಂದು ಒತ್ತಾಯಿಸಿದೆ.       

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT