ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿಷೇಧ ತೆರವು ಬಳಿಕವೂ ಬಂಗಾಳದಲ್ಲಿ ಪ್ರದರ್ಶನ ಕಾಣದ ‘ದಿ ಕೇರಳ ಸ್ಟೋರಿ’

Published 20 ಮೇ 2023, 13:51 IST
Last Updated 20 ಮೇ 2023, 13:51 IST
ಅಕ್ಷರ ಗಾತ್ರ

ಕೋಲ್ಕತ್ತ : ಚಲನಚಿತ್ರ ಮಂದಿರಗಳ ಮಾಲೀಕರ ನಿರಾಸಕ್ತಿಯಿಂದಾಗಿ ಪಶ್ಚಿಮ ಬಂಗಾಳದಲ್ಲಿ ಇನ್ನೂ ‘ದಿ ಕೇರಳ ಸ್ಟೋರಿ’ ಚಲನಚಿತ್ರ ಪ್ರದರ್ಶನ ಕಂಡಿಲ್ಲ. 

ಕೋಮು ಸಂಘರ್ಷಕ್ಕೆ ದಾರಿ ಮಾಡಿಕೊಡುತ್ತದೆ ಎಂಬ ಕಾರಣ ನೀಡಿ ಮಮತಾ ಬ್ಯಾನರ್ಜಿ ನೇತೃತ್ವದ ರಾಜ್ಯ ಸರ್ಕಾರವು ಚಿತ್ರ ಪ್ರದರ್ಶನದ ಮೇಲೆ ನಿಷೇಧ ಹೇರಿತ್ತು. ಆದರೆ, ಸುಪ್ರೀಂ ಕೋರ್ಟ್‌ ಗುರುವಾರ ನಿಷೇಧ ತೆರವುಗೊಳಿಸಿತ್ತು. ನ್ಯಾಯಾಲಯದ ಆದೇಶದ ಹೊರತಾಗಿಯೂ ಚಿತ್ರ ಮಂದಿರಗಳಲ್ಲಿ ಈ ಚಿತ್ರ ಪ್ರದರ್ಶನ ಕಂಡಿಲ್ಲ.

‘ರಾಜ್ಯದಲ್ಲಿನ ಪರಿಸ್ಥಿತಿ ಇನ್ನೂ ಬದಲಾಗಿಲ್ಲ. ಚಿತ್ರ ಮಂದಿರಗಳ ಮಾಲೀಕರು ಚಿತ್ರ ಪ್ರದರ್ಶನಕ್ಕೆ ಆಸಕ್ತಿ ತೋರುತ್ತಿಲ್ಲ’ ಎಂದು ವಿತರಕ ಸತದೀಪ್‌ ಸಹಾ ಶನಿವಾರ ತಿಳಿಸಿದ್ದಾರೆ.

‘ರಾಜ್ಯದಲ್ಲಿ ಚಲನಚಿತ್ರ ಪ್ರದರ್ಶಿಸದಂತೆ ತಮಗೆ ಕೆಲವರು ಬೆದರಿಕೆ ಹಾಕಿರುವುದಾಗಿ ಚಿತ್ರ ಮಂದಿರಗಳ ಮಾಲೀಕರು ನನ್ನ ಬಳಿ ಅಳಲು ತೋಡಿಕೊಂಡಿದ್ದಾರೆ’ ಎಂದು ಚಿತ್ರದ ನಿರ್ದೇಶಕ ಸುದೀಪ್ತೋ ಸೇನ್‌ ಶುಕ್ರವಾರ ದೂರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT