ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಡಿಶಾ ರೈಲು ದುರಂತದ ತನಿಖೆಯನ್ನು ಸಿಬಿಐಗೆ ವಹಿಸಲು ರೈಲ್ವೆ ಮಂಡಳಿ ಶಿಫಾರಸು

ಒಡಿಶಾ ರೈಲು ದುರಂತವನ್ನು ಸಿಬಿಐ ತನಿಖೆಗೆ ವಹಿಸುವಂತೆ ರೈಲ್ವೆ ಮಂಡಳಿ ಶಿಫಾರಸು ಮಾಡಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.
Published 4 ಜೂನ್ 2023, 13:34 IST
Last Updated 4 ಜೂನ್ 2023, 13:34 IST
ಅಕ್ಷರ ಗಾತ್ರ

ನವದೆಹಲಿ: ಒಡಿಶಾ ರೈಲು ದುರಂತವನ್ನು ಸಿಬಿಐ ತನಿಖೆಗೆ ವಹಿಸುವಂತೆ ರೈಲ್ವೆ ಮಂಡಳಿ ಶಿಫಾರಸು ಮಾಡಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

ಘಟನಾ ಸ್ಥಳದಲ್ಲಿ ಈ ಕುರಿತು ಅವರು ಸುದ್ದಿಗಾರರ ಜೊತೆ ಮಾತನಾಡಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲಿನ ಚಾಲಕನ ತಪ್ಪು ಕಂಡು ಬಂದಿಲ್ಲ ಹಾಗೂ ರೈಲ್ವೆ ಎಲೆಕ್ಟ್ರಾನಿಕ್ ಉಪಕರಣಗಳಲ್ಲೂ ದೋಷಗಳು ಇರಲಿಲ್ಲ ಎಂದು ತಿಳಿದು ಬಂದಿದ್ದು, ಇದರ ಹಿಂದೆ ವಿಧ್ವಂಸಕ ಕೃತ್ಯದ ಸಂಚಿರಬಹುದೇ? ಎಂಬ ದೃಷ್ಟಿಕೋನದಲ್ಲಿ ಗಂಭಿರವಾಗಿ ಚಿಂತಿಸಲಾಗುತ್ತಿದೆ ಎಂದು ಈ ಮೊದಲು ವೈಷ್ಣವ್ ಹೇಳಿದ್ದರು.

ಈ ನಿಟ್ಟಿನಲ್ಲಿ ರೈಲ್ವೆ ಮಂಡಳಿ ತನಿಖೆಯನ್ನು ಸಿಬಿಐಗೆ ವಹಿಸಲು ಶಿಫಾರಸು ಮಾಡಿದೆ ಎನ್ನಲಾಗಿದೆ.

ಘಟನಾ ಸ್ಥಳದಲ್ಲಿ ತೆರವು ಕಾರ್ಯಾಚರಣೆ ಬಹುತೇಕ ಮುಗಿದಿದ್ದು ಹಳಿಗಳ ಪುನರ್ ಜೋಡಣೆ ಹಾಗೂ ಇತರೆ ತಾಂತ್ರಿಕ ಕೆಲಸಗಳನ್ನು ಮುಗಿಸಲು ಭಾರಿ ಪ್ರಮಾಣದಲ್ಲಿ ಕೆಲಸ ನಡೆದಿದೆ ಎಂದು ರೈಲು ಸಚಿವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT