ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Mocha Cyclone: ಬಂಗಾಳ ಕೊಲ್ಲಿಯಲ್ಲಿ ಅತ್ಯಂತ ತೀವ್ರ ಸ್ವರೂಪ ತಾಳಿದ ಚಂಡಮಾರುತ

Published 12 ಮೇ 2023, 4:51 IST
Last Updated 12 ಮೇ 2023, 4:51 IST
ಅಕ್ಷರ ಗಾತ್ರ

ಕೋಲ್ಕತ್ತ: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಮೋಚಾ (Mocha) ಚಂಡಮಾರುತ ಅತ್ಯಂತ ತೀವ್ರ ಸ್ವರೂಪ (Very Severe Cyclonic Storm) ತಾಳಿರುವುದಾಗಿ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.

ಪೋರ್ಟ್ ಬ್ಲೇರ್‌ನಿಂದ 520 ಕಿ.ಮೀ. ದೂರದ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಮೋಖಾ ಚಂಡಮಾರುತ ಇಂದು ಬೆಳಿಗ್ಗೆ (ಶುಕ್ರವಾರ) 5.30ರ ಸುಮಾರಿಗೆ ತೀವ್ರ ಸ್ವರೂಪದಿಂದ ಅತ್ಯಂತ ತೀವ್ರ ಸ್ವರೂಪ ತಾಳಿರುವುದಾಗಿ ಟ್ವೀಟ್ ಮೂಲಕ ತಿಳಿಸಿದೆ.

ಭಾರತದ ಪಶ್ಚಿಮ ಕರಾವಳಿಯಲ್ಲಿ ಚಂಡಮಾರುತದ ಪ್ರಭಾವ ಉಂಟಾಗುವ ಭೀತಿ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದ ದೀಘಾದಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯು (ಎನ್‌ಡಿಆರ್‌ಎಫ್) ಎಂಟು ತಂಡಗಳಲ್ಲಾಗಿ 200 ಸಿಬ್ಬಂದಿ ನಿಯೋಜಿಸಿದೆ. ಭಾನುವಾರದವರೆಗೆ ಮೀನುಗಾರಿಕೆಗೆ ತೆರಳದಂತೆ ಎಚ್ಚರಿಸಲಾಗಿದೆ.

ಚಂಡಮಾರುತದ ಹಿನ್ನೆಲೆಯಲ್ಲಿ ಭಾರಿ ಗಾಳಿ, ಮಳೆಯಾಗುವ ಸಾಧ್ಯತೆಯಿದೆ. ಮೋಚಾ ಚಂಡಮಾರುತ ಮೇ 14ರ ವೇಳೆಗೆ ಬಾಂಗ್ಲಾದೇಶ ಹಾಗೂ ಮ್ಯಾನ್ಮಾರ್‌ಗೆ ಅಪ್ಪಳಿಸುವ ಸಾಧ್ಯತೆಯಿದೆ.

ಈ ಹವಾಮಾನ ವೈಪರೀತ್ಯದಿಂದಾಗಿ ಶನಿವಾರದಂದು ತ್ರಿಪುರಾ ಮತ್ತು ಮಿಜೋರಾಂನಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಭಾನುವಾರದಂದು ನಾಗಾಲ್ಯಾಂಡ್, ಮಣಿಪುರ ಮತ್ತು ಅಸ್ಸಾಂನಲ್ಲಿ ಮಳೆಯಾಗುವ ಸಾಧ್ಯತೆಯಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT