ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿಯಲ್ಲಿ ವಾಯು ಮಾಲಿನ್ಯದಿಂದ ಅತ್ಯಂತ ಕಳವಳಕಾರಿ ಪರಿಸ್ಥಿತಿ: ಗವರ್ನರ್ ಸಕ್ಸೇನಾ

Published 3 ನವೆಂಬರ್ 2023, 12:43 IST
Last Updated 3 ನವೆಂಬರ್ 2023, 12:43 IST
ಅಕ್ಷರ ಗಾತ್ರ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯದಿಂದ ಉಂಟಾಗುತ್ತಿರುವ ಪರಿಸ್ಥಿತಿಯು ಅತ್ಯಂತ ಕಳವಳಕಾರಿಯಾಗಿದೆ ಎಂದು ಲೆಫ್ಟಿನೆಂಟ್‌ ಗವರ್ನರ್‌ ಸಕ್ಸೇನಾ ಹೇಳಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಸಕ್ಸೇನಾ, ವಾಯು ಮಾಲಿನ್ಯದಿಂದಾಗಿ ದೆಹಲಿಯಲ್ಲಿ ಉಂಟಾಗಿರುವ ಪರಿಸ್ಥಿತಿ ಕುರಿತು ರಾಜಭವನದಲ್ಲಿ ಸಭೆ ನಡೆಸಲು ನಿರ್ಧರಿಸಲಾಗಿದೆ. ನಗರದ ಪರಿಸ್ಥಿತಿಯ ಅವಲೋಕನ ಕುರಿತು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಮತ್ತು ಪರಿಸರ ಖಾತೆ ಸಚಿವರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ನಗರದಲ್ಲಿ ವಾಯು ಗುಣಮಟ್ಟ ಸೂಚ್ಯಂಕವು 800 ದಾಟಿದೆ ಎಂದು ವರದಿಯಾಗಿದೆ. ಜನರು ಸಾಧ್ಯವಾದಷ್ಟು ಮನೆಯೊಳಗೆ ಇರುವಂತೆ, ವಿಶೇಷವಾಗಿ ಮಕ್ಕಳು ಮತ್ತು ಹಿರಿಯರು ವಾಯು ಮಾಲಿನ್ಯದಿಂದ ಕಲುಷಿತಗೊಂಡಿರುವ ವಾತಾವರಣಕ್ಕೆ ಬರದಂತೆ ಅವರು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT