ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಆಂಧ್ರ: ಇಂದು ಬೆಳಗ್ಗೆ 11.27ಕ್ಕೆ ನಾಯ್ಡು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ

Published 12 ಜೂನ್ 2024, 4:14 IST
Last Updated 12 ಜೂನ್ 2024, 4:14 IST
ಅಕ್ಷರ ಗಾತ್ರ

ವಿಜಯವಾಡ: ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಅವರು ಬುಧವಾರ ಬೆಳಗ್ಗೆ 11.27ಕ್ಕೆ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.

ಈ ಕಾರ್ಯಕ್ರಮಕ್ಕಾಗಿ ಇಲ್ಲಿನ ಹೊರವಲಯದ ಗನ್ನವರಂ ವಿಮಾನ ನಿಲ್ದಾಣ ಬಳಿಯ ಕೇಸರಪಲ್ಲಿ ಐಟಿ ಪಾರ್ಕ್‌ನಲ್ಲಿ ನಾಯ್ಡು ಸಿದ್ಧತೆಗಳನ್ನು ಮಾಡಲಾಗಿದೆ.

ಈ ವೇಳೆ ನಾಯ್ಡು ಅವರೊಂದಿಗೆ ಅವರ ಮಗ ನಾರಾ ಲೋಕೇಶ್, ಜನಸೇನಾ ಮುಖಂಡ ಪವನ್‌ ಕಲ್ಯಾಣ್‌, ಎನ್‌.ಮನೋಹರ್ ಕೂಡ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವರು.

ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಸಮಾರಂಭದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ. 

ವಿಧಾನಸಭೆಯಲ್ಲಿ ಎನ್‌ಡಿಯ ನಾಯಕರಾಗಿ ಚಂದ್ರಬಾಬು ನಾಯ್ಡು, ಜನಸೇನಾ ಪಕ್ಷದ ನಾಯಕರಾಗಿ ಪವನ್ ಕಲ್ಯಾಣ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT