ನವದೆಹಲಿ (ಪಿಟಿಐ): ‘ಬಿಜೆಪಿಯ ಐಟಿ ವಿಭಾಗದ ಮುಖ್ಯಸ್ಥ ಅಮಿತ್ ಮಾಳವಿಯಾ ವಿರುದ್ಧ ಸುಳ್ಳು ಸುದ್ದಿ ಬಿತ್ತರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ಮಾಜಿ ಸಲಹೆಗಾರ ದೇವೇಶ್ ಕುಮಾರ್ ವಿರುದ್ಧ ‘ದಿ ವೈರ್’ ಸುದ್ದಿ ಪೋರ್ಟಲ್ ದೂರು ದಾಖಲಿಸಿದೆ’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಭಾನುವಾರ ಹೇಳಿದ್ದಾರೆ.

‘ಇ–ಮೇಲ್ ಮೂಲಕ ಶನಿವಾರ ರಾತ್ರಿ ದೂರು ನೀಡಲಾಗಿದೆ’ ಎಂದು ಅವರು ತಿಳಿಸಿದ್ದಾರೆ.

ತನ್ನ ಹೆಸರಿಗೆ ಕಳಂಕ ತರುವ ದುರುದ್ದೇಶದಿಂದ ಸುಳ್ಳು ಸುದ್ದಿ ಪ್ರಕಟಿಸಲಾಗಿದೆ ಎಂದು ಆರೋಪಿಸಿ ಮಾಳವಿಯಾ ಅವರು ಶನಿವಾರ ದೂರು ನೀಡಿದ್ದರು. ಇದರ ಆಧಾರದಲ್ಲಿ ಪೊಲೀಸರು ದಿ ವೈರ್ ಹಾಗೂ ಅದರ ಸಂಪಾದಕರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು.

‘ದೂರಿನ ಆಧಾರದಲ್ಲಿ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ. ತನಿಖೆ ಆರಂಭಿಸಲಾಗಿದ್ದು, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.