ಹೈದರಾಬಾದ್: ಸಂಧ್ಯಾ ಥಿಯೇಟರ್ನಲ್ಲಿ 'ಪುಷ್ಪ 2: ದಿ ರೂಲ್' ಸಿನಿಮಾದ ಪ್ರೀಮಿಯರ್ ಪ್ರದರ್ಶನ ನಡೆಯುತ್ತಿದ್ದಾಗ ಉಂಟಾದ ನೂಕುನುಗ್ಗಲು ಮತ್ತು ಕಾಲ್ತುಳಿತದಲ್ಲಿ ಮಹಿಳೆಯೊಬ್ಬರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಮಾಹಿತಿ ಮತ್ತು ವಿಡಿಯೊ ಹರಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೈದರಾಬಾದ್ ಪೊಲೀಸರು ಇಂದು (ಬುಧವಾರ) ಎಚ್ಚರಿಕೆ ನೀಡಿದ್ದಾರೆ.

ಡಿಸೆಂಬರ್ 4ರಂದು ನಟ ಅಲ್ಲು ಅರ್ಜುನ್ ಚಿತ್ರಮಂದಿರಕ್ಕೆ ಬರುವ ಮುನ್ನವೇ ಕಾಲ್ತುಳಿತ ನಡೆದಿದೆ ಎಂದು ಕೆಲವರು ಸುಳ್ಳು ವಿಡಿಯೊ ಪೋಸ್ಟ್ ಮಾಡಿರುವುದು ನಮ್ಮ ಗಮನಕ್ಕೆ ಬಂದಿದೆ ಎಂದು 'ಎಕ್ಸ್'ನಲ್ಲಿ ಹೈದರಾಬಾದ್ ಪೊಲೀಸ್ ತಿಳಿಸಿದೆ.

ತನಿಖೆ ನಂತರದ ನೈಜ ವಿಡಿಯೊವನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ. ಆದರೂ ಅಲ್ಲು ಅರ್ಜುನ್ ಬರುವ ಮೊದಲೇ ಕಾಲ್ತುಳಿತ ಸಂಭವಿಸಿದೆ ಎಂದು ಕೆಲವರು ಉದ್ದೇಶಪೂರ್ವಕವಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೂ ಪೋಸ್ಟ್ ಮಾಡಿದ್ದಾರೆ. ಪ್ರಕರಣದ ತನಿಖೆ ನಡೆಯುತ್ತಿರುವಾಗ ಈ ರೀತಿಯಾಗಿ ತಪ್ಪು ಮಾಹಿತಿ ಹರಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ಎಚ್ಚರಿಸಿದೆ.

ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಇಲಾಖೆಗೆ ಮಾನಹಾನಿಯನ್ನುಂಟು ಮಾಡುವ ರೀತಿಯಲ್ಲಿ ಅಪಪ್ರಚಾರ ನಡೆಸಿದರೆ ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಎಚ್ಚರಿಸಿದೆ.

ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸಾರ್ವಜನಿಕರಿಗೆ ಮನವಿ ಮಾಡಿರುವ ಪೊಲೀಸರು, ಈ ಪ್ರಕರಣ ಸಂಬಂಧ ಏನೇ ಪುರಾವೆಗಳು ಇದ್ದರೂ ಮಾಹಿತಿಯನ್ನು ಇಲಾಖೆಗೆ ಹಸ್ತಾಂತರಿಸಬಹುದು ಎಂದು ವಿನಂತಿ ಮಾಡಿದೆ.

ಘಟನೆಯಲ್ಲಿ 35 ವರ್ಷದ ಮಹಿಳೆ ಮೃತಪಟ್ಟಿದ್ದರೆ ಆಕೆಯ ಮಗ ಗಂಭೀರವಾಗಿ ಗಾಯಗೊಂಡಿದ್ದನು. ಪ್ರಕರಣ ಸಂಬಂಧ ಅಲ್ಲು ಅರ್ಜುನ್, ನಟನ ಭದ್ರತಾ ತಂಡ ಮತ್ತು ಚಿತ್ರಮಂದಿರದ ಮ್ಯಾನೇಜ್ಮೆಂಟ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಡಿಸೆಂಬರ್ 13ರಂದು ಅಲ್ಲು ಅರ್ಜುನ್ ಅವರನ್ನು ಬಂಧಿಸಲಾಗಿತ್ತು. ಡಿ.14ರಂದು ತೆಲಂಗಾಣ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು.

ಮಂಗಳವಾರ ವಿಚಾರಣೆಗೆ ಹಾಜರಾಗಿದ್ದ ಅಲ್ಲು ಅರ್ಜುನ್ ಅವರನ್ನು ಮೂರು ತಾಸಿಗೂ ಹೆಚ್ಚು ಹೊತ್ತು ವಿಚಾರಣೆಗೆ ಒಳಪಡಿಸಲಾಗಿತ್ತು.
.ಕಾಲ್ತುಳಿತ ಪ್ರಕರಣ: ಪೊಲೀಸರ ಮುಂದೆ ವಿಚಾರಣೆಗೆ ಹಾಜರಾದ ನಟ ಅಲ್ಲು ಅರ್ಜುನ್.ವಿಚಾರಣೆ ಎದುರಿಸಿ ಹೊರಬಂದ ಅಲ್ಲು: ಥಿಯೇಟರ್ಗೆ ಕರೆದೊಯ್ದು ದೃಶ್ಯ ಮರುಸೃಷ್ಟಿ?.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.