ಮುಂಬೈ: ಕೇಂದ್ರ ರೈಲ್ವೆ ಸಚಿವ ಪೀಯೂಷ್ ಗೋಯಲ್ ಮನೆಯಲ್ಲಿ ಮನೆಗೆಲಸ ಮಾಡುತ್ತಿದ್ದ ಯುವಕನನ್ನು ಕಳ್ಳತನ ಆರೋಪದ ಮೇಲೆ ಬಂಧಿಸಲಾಗಿದೆ.

ದೆಹಲಿಯ ಮೂಲದ ವಿಷ್ಣು ಕುಮಾರ್ (25) ಬಂಧಿತ. ಮನೆಯ ಕಂಪ್ಯೂಟರ್ ಬಳಸಿಅಪರಿಚಿತರಿಗೆ ಮಾಹಿತಿ ಹಂಚಿದ ಆರೋಪವೂ ಈತನ ಮೇಲಿದ್ದು, ಮಾಹಿತಿ ತಂತ್ರಜ್ಞಾನ ಕಾಯ್ದೆ ಅನ್ವಯ ದೂರು ದಾಖಲಿಸಿಕೊಳ್ಳಲಾಗಿದೆ ಎಂದು ಗುರುವಾರ ಪೊಲೀಸರು ತಿಳಿಸಿದ್ದಾರೆ.

ಪಾರಂಪರಿಕ ವಸ್ತುಗಳು, ಬಟ್ಟೆಗಳು ಮತ್ತು ಬೆಳ್ಳಿಯ ಪಾತ್ರೆಗಳು ಕಳುವಾಗಿರುವ ಕುರಿತು ಗೋಯಲ್ ಪತ್ನಿ ದೂರು ನೀಡಿದ್ದರು. ತನಿಖೆ ವೇಳೆ ಆರೋಪಿಯ ಇ–ಮೇಲ್ಗಳನ್ನು ಪರಿಶೀಲಿಸಿದಾಗ ಅಮೂಲ್ಯ ಮಾಹಿತಿಯನ್ನು ಅಪರಿಚಿತರೊಂದಿಗೆ ಹಂಚಿಕೊಂಡಿರುವುದು ಬೆಳಕಿಗೆ ಬಂದಿದೆ. ಆರೋಪಿಯನ್ನು ಬುಧವಾರ ದೆಹಲಿಯಲ್ಲಿ ಬಂಧಿಸಲಾಗಿದ್ದು, ತನಿಖೆ ಮುಂದುವರಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.