ನವದೆಹಲಿ: ಸಾಮಾಜಿಕ ಮಾಧ್ಯಮಗಳೂ ಸೇರಿದಂತೆ ಇಂಟರ್‌ನೆಟ್ ಆಧಾರಿತ ವೇದಿಕೆಗಳ ಮೂಲಕ ಕೋವಿಡ್–19ಗೆ ಸಂಬಂಧಿಸಿ ಜನರು ನೆರವು ಕೇಳುವುದನ್ನು ನಿರ್ಬಂಧಿಸಬಾರದು ಎಂದು ಸುಪ್ರೀಂಕೋರ್ಟ್ ಶುಕ್ರವಾರ ಹೇಳಿದೆ.

ಜಾಲತಾಣಗಳ ಮೂಲಕ ಜನರು ಸುಳ್ಳು ದೂರುಗಳನ್ನು ದಾಖಲಿಸುತ್ತಾರೆ, ಅಗತ್ಯವಿಲ್ಲದಿದ್ದರೂ ನೆರವು ಯಾಚಿಸುತ್ತಾರೆ ಎಂದು ಭಾವಿಸಿ, ನೆರವು ನಿರಾಕರಿಸಬಾರದು ಎಂದು ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠ ಹೇಳಿತು.

ನ್ಯಾಯಮೂರ್ತಿಗಳಾದ ಎಲ್.ನಾಗೇಶ್ವರರಾವ್ ಹಾಗೂ ಎಸ್.ರವೀಂದ್ರ ಭಟ್ ಅವರೂ ಈ ಪೀಠದಲ್ಲಿದ್ದಾರೆ.

‘ಯಾವುದೇ ರೀತಿಯ ಅಡೆತಡೆ ಇಲ್ಲದೆಯೇ ಮಾಹಿತಿಯ ಪ್ರಸಾರಕ್ಕೆ ಅವಕಾಶ ಇರಬೇಕು. ಜನರ ಅಹವಾಲುಗಳನ್ನು ನಾವು ಕೇಳಬೇಕು’ ಎಂದು ಅಭಿಪ್ರಾಯಪಟ್ಟ ನ್ಯಾಯಪೀಠ, ‘ಆಮ್ಲಜನಕ, ಹಾಸಿಗೆ ಕೊರತೆ ಬಗ್ಗೆ, ವೈದ್ಯರು ಸಿಗದಿರುವ ಬಗ್ಗೆ ಜನರು ಜಾಲತಾಣಗಳಲ್ಲಿ ಪೋಸ್ಟ್ ಮಾಡಿದಾಗ, ವದಂತಿ ಹಬ್ಬಿಸುತ್ತಿದ್ದಾರೆ ಎಂದು ಪರಿಗಣಿಸಿ ಅಂಥವರ ವಿರುದ್ಧ ಕ್ರಮ ತೆಗೆದುಕೊಳ್ಳಬಾರದು’ ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿತು.

‘ಕೋವಿಡ್‌ನಿಂದಾಗಿ ಸಂಕಷ್ಟದಲ್ಲಿರುವ ಜನರು ಇಂಥ ಪೋಸ್ಟ್‌ಗಳನ್ನು ಮಾಡಿದಾಗ ಅವರ ವಿರುದ್ಧ ಕ್ರಮ ತೆಗೆದುಕೊಂಡರೆ ಅದನ್ನು ನ್ಯಾಯಾಂಗ ನಿಂದನೆ ಎಂದೇ ಪರಿಗಣಿಸಲಾಗುವುದು’ ಎಂದೂ ಎಚ್ಚರಿಸಿತು.

‘ಸೋಂಕಿತ ವೈದ್ಯರು ಹಾಗೂ ಆರೋಗ್ಯ ಕಾರ್ಯಕರ್ತರಿಗೂ ಹಾಸಿಗೆ ಸಿಗುತ್ತಿಲ್ಲ’ ಎಂಬ ಬಗ್ಗೆ ನ್ಯಾಯಪೀಠವು, ‘ಪರಿಸ್ಥಿತಿ ಗಂಭೀರವಾಗಿದೆ. ಕಳೆದ 70 ವರ್ಷಗಳ ಅವಧಿಯಲ್ಲಿ ಆರೋಗ್ಯ ಕ್ಷೇತ್ರಕ್ಕೆ ಒದಗಿಸಿರುವ ಮೂಲಸೌಕರ್ಯ ಯಾವುದಕ್ಕೂ ಸಾಕಾಗುತ್ತಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿತು.

ದೆಹಲಿಯಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೆ ತನ್ನಿ: ಎಎಪಿ ಶಾಸಕ ಇಕ್ಬಾಲ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.