ನವದೆಹಲಿ: ‘ಕೇಂದ್ರ ಸರ್ಕಾರ ಬುಧವಾರದಿಂದ ಅನ್ವಯವಾಗುವಂತೆ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ದರವನ್ನು ₹ 200 ಕಡಿತಗೊಳಿಸಿರುವುದು ಪ್ರತಿಪಕ್ಷಗಳ ಮೈತ್ರಿಕೂಟದ ಎರಡು ಸಭೆಗಳ ಫಲ’ ಎಂದು ‘ಇಂಡಿಯಾ’ ಮೈತ್ರಿಕೂಟವು ಪ್ರತಿಪಾದಿಸಿದೆ.
‘ಪ್ರಧಾನಿ ನರೇಂದ್ರ ಮೋದಿ ಈಗ ತಮ್ಮ ಕುರ್ಚಿ ಉಳಿಸಿಕೊಳ್ಳುವ ಹತಾಶೆಗೆ ಒಳಗಾಗಿದ್ದಾರೆ. ಬರುವ ದಿನಗಳಲ್ಲಿ ಇಂತಹ ಇನ್ನಷ್ಟು ‘ಕೊಡುಗೆ’ಗಳನ್ನು ನಿರೀಕ್ಷಿಸಬಹುದು’ ಎಂದು ‘ಇಂಡಿಯಾ’ ಭಾಗವಾಗಿರುವ ಕಾಂಗ್ರೆಸ್ ಪಕ್ಷದ ವಕ್ತಾರ ಜೈರಾಂ ರಮೇಶ್ ಅವರು ಪ್ರತಿಕ್ರಿಯಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.