ಮಂಗಳವಾರ, 16 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕಾರಿಗೆ ಸಿಕ್ಕು ಯುವತಿ ಸಾವು: ತಪ್ಪಿತಸ್ಥರನ್ನು ಗಲ್ಲಿಗೇರಿಸಬೇಕೇಂದ ಕೇಜ್ರಿವಾಲ್‌

Last Updated 2 ಜನವರಿ 2023, 8:22 IST
ಅಕ್ಷರ ಗಾತ್ರ

ನವದೆಹಲಿ: ಕಾರಿನ ಕೆಳಗೆ ಸಿಲುಕಿದ ಯುವತಿಯ ಶವವನ್ನು ಹಲವು ಕಿಲೋಮೀಟರ್‌ಗಳವರೆಗೆ ಎಳೆದೊಯ್ದ ಪ್ರಕರಣದ ಬಗ್ಗೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.

‘ಇದು ಅಪರೂಪದಲ್ಲಿ ಅಪರೂಪದ ಪ್ರಕರಣ. ಆರೋಪಿಗಳನ್ನು ಗಲ್ಲಿಗೇರಿಸಬೇಕು. ಯುವತಿಯ ಮರಣೋತ್ತರ ಪರೀಕ್ಷೆ ವರದಿ ಇನ್ನಷ್ಟೇ ಕೈಸೇರಬೇಕಾಗಿದೆ’ ಎಂದು ಅವರು ಹೇಳಿದ್ದಾರೆ.

‘ಘಟನೆ ಸಂಬಂಧ ಮಾರುತಿ ಬಲೆನೊ ಕಾರಿನಲ್ಲಿದ್ದ, ಪಾನಮತ್ತರಾಗಿದ್ದ ಐವರನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ಹೇಳಿದ್ದಾರೆ.

ರಸ್ತೆಯ ಮೇಲೆ ಯುವತಿಯ ಮೃತದೇಹ ನಗ್ನಾವಸ್ಥೆಯಲ್ಲಿ ಬಿದ್ದಿರುವ, ಆಕೆಯ ಕಾಲುಗಳು ಮುರಿದಿರುವ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾನುವಾರ ಹರಿದಾಡಿದೆ.

‘ಕುತುಬ್‌ಗಡ ಪ್ರದೇಶದತ್ತ ಹೊರಟಿದ್ದ ಕಾರಿನಡಿ ಯುವತಿಯ ಮೃತದೇಹ ಸಿಲುಕಿತ್ತು. ರೋಹಿಣಿ ಜಿಲ್ಲೆಯ ಖಂಜಾವಲಾ ಪೊಲೀಸ್‌ ಠಾಣೆಗೆ ಬೆಳಿಗ್ಗೆ 3.24ರ ಸುಮಾರಿಗೆ ಈ ಕುರಿತ ಮಾಹಿತಿ ಲಭಿಸಿತ್ತು. ಸ್ಥಳಕ್ಕೆ ಹೋಗಿದ್ದ ಸಿಬ್ಬಂದಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಂಗೋಲ್‌ ಪುರಿಯಲ್ಲಿರುವ ಸಂಜಯ್‌ ಗಾಂಧಿ ಸ್ಮಾರಕ ಆಸ್ಪತ್ರೆಗೆ ರವಾನಿಸಿದ್ದರು’ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT