ಮುಂಬೈ (ಪಿಟಿಐ): ದೆಹಲಿಯ ವ್ಯಕ್ತಿಯೊಬ್ಬರಿಗೆ ಕೊರೊನಾ ರೂಪಾಂತರಿ ತಳಿ ‘ಓಮೈಕ್ರಾನ್’ ಸೋಂಕು ತಗುಲಿರುವುದು ದೃಢವಾಗಿದೆ. ಇದರಿಂದಾಗಿ, ದೇಶದಲ್ಲಿ ಓಮೈಕ್ರಾನ್ ಸೋಂಕಿತರ ಸಂಖ್ಯೆ 33ಕ್ಕೆ ಏರಿದೆ. ಮಹಾರಾಷ್ಟ್ರದಲ್ಲಿ ಮೂರು ವರ್ಷದ ಮಗು ಸೇರಿ ಏಳು ಮಂದಿಗೆ ಶುಕ್ರವಾರ ಓಮೈಕ್ರಾನ್ ಸೋಂಕು ದೃಢಪಟ್ಟಿತ್ತು.

ಮಹಾರಾಷ್ಟ್ರದಿಂದ ವರದಿ ಆಗಿರುವ ಏಳು ಪ್ರಕರಣಗಳಲ್ಲಿ ಮೂರು ಪ್ರಕರಣಗಳು ಮುಂಬೈನಲ್ಲಿ ಪತ್ತೆ ಆಗಿವೆ ಮತ್ತು ನಾಲ್ಕು ಪ್ರಕರಣಗಳು ಪುಣೆ ಜಿಲ್ಲೆಯ ಪಿಂಪ್ರಿ ಚಿಂಚ್‌ವಾಡ್ ಪ್ರದೇಶದಲ್ಲಿ ಪತ್ತೆ ಆಗಿವೆ. ಮುಂಬೈನ ಮೂವರು ಸೋಂಕಿತರು ತಾಂಜಾನಿಯಾ, ಬ್ರಿಟನ್ ಮತ್ತು ದಕ್ಷಿಣ ಆಫ್ರಿಕದಿಂದ ಇತ್ತೀಚೆಗೆ ಮರಳಿದ್ದರು.

ಓಮೈಕ್ರಾನ್ ಸೋಂಕಿತ ದೆಹಲಿಯ 35 ವರ್ಷ ವಯಸ್ಸಿನ ವ್ಯಕ್ತಿ ಜಿಂಬಾಬ್ವೆ ಮತ್ತು ದಕ್ಷಿಣ ಆಫ್ರಿಕಾದಿಂದ ಹಿಂದಿರುಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.