ಚೆನ್ನೈ: ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷಕ್ಕೆ ಬೆಂಬಲ ನೀಡುವ ಕುರಿತು ನಾವಾಗಲಿ, ಎಡಪಕ್ಷಗಳಾದ ಸಿಪಿಐ ಮತ್ತು ಸಿಪಿಐ(ಎಂ) ಅಂತಿಮ ನಿರ್ಧಾರವನ್ನು ತೆಗೆದುಕೊಂಡಿಲ್ಲ ಎಂದು ವಿಡುದಲೈ ಚಿರುಥೈಗಳ್(ವಿಸಿಕೆ) ಪಕ್ಷದ ಸಂಸ್ಥಾಪಕ ದೋಳ್ ತಿರುಮಾವಳವನ್ ಅವರು ಮಂಗಳವಾರ(ಮೇ 5) ಹೇಳಿದ್ದಾರೆ.

234 ಸದಸ್ಯ ಬಲದ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ವಿಜಯ್ ನೇತೃತ್ವದ ಟಿವಿಕೆ 108 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಆದರೆ, ಬಹುಮತ ಪಡೆಯಲು 118 ಸ್ಥಾನಗಳ ಅಗತ್ಯವಿದೆ. ಹೀಗಾಗಿ ವಿಜಯ್ ಅವರು ಎಡಪಕ್ಷಗಳೊಂದಿಗೆ ಮೈತ್ರಿಗೆ ಮುಂದಾಗುವ ಸಾಧ್ಯತೆಯಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಡುತ್ತಿದ್ದಾರೆ.

ಈ ಕುರಿತು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ತಿರುಮಾವಳವನ್, ‘ಮೂರು ಪಕ್ಷಗಳು ಕೂಡ ಬಹುಕಾಲದಿಂದ ಜಾತ್ಯತೀತ ರಾಜಕೀಯ ಮಾಡುತ್ತಿದ್ದೇವೆ. ಭವಿಷ್ಯದಲ್ಲೂ ನಾವೆಲ್ಲರೂ ಸೇರಿಕೊಂಡು ರಾಜಕೀಯ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೇವೆ’ ಎಂದು ತಿಳಿಸಿದ್ದಾರೆ.

ತಮಿಳುನಾಡಿನಲ್ಲಿ ಡಿಎಂಕೆ 59, ಎಐಎಡಿಎಂಕೆ 47, ಕಾಂಗ್ರೆಸ್ 5, ಪಿಎಂಕೆ 4, ಐಯುಎಂಎಲ್ 2, ಸಿಪಿಐ 2, ಸಿಪಿಐ(ಎಂ) 2 ಹಾಗೂ ವಿಸಿಕೆ 2 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಬಿಜೆಪಿ, ಡಿಎಂಡಿಕೆ ಮತ್ತು ಎಎಂಎಂಕೆ ಪಕ್ಷಗಳು ತಲಾ 1 ಸ್ಥಾನದಲ್ಲಿ ಗೆಲುವು ಸಾಧಿಸಿವೆ.

ಚುನಾವಣೆಗೂ ಮುನ್ನ ವಿಸಿಕೆ ಹಾಗೂ ಎಡಪಕ್ಷಗಳು ಡಿಎಂಕೆ ಮೈತ್ರಿಕೂಟದಲ್ಲಿದ್ದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.