ಅಹಮದಾಬಾದ್/ಇಸ್ಲಾಮಾಬಾದ್: ಅರಬ್ಬೀ ಸಮುದ್ರ ತೀರದುದ್ದಕ್ಕೂ ಇರುವ ಭಾರತ ಮತ್ತು ಪಾಕಿಸ್ತಾನ ಕರಾವಳಿ ಪ್ರದೇಶಗಳಲ್ಲಿ ಭಾರಿ ಮಳೆ ಸುರಿಯುತ್ತಿದೆ. ಪಶ್ಚಿಮ ಭಾರತದ ಗುಜರಾತ್‌ನ ನಗರಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಸಾವಿರಾರು ಜನ ಮನೆ ತೊರೆಯುವ ಪರಿಸ್ಥಿತಿ ಎದುರಾಗಿದೆ. ಶುಕ್ರವಾರದ ಒಳಗೆ ಚಂಡಮಾರುತ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.