ನಾಗ್ಪುರ: ಮಹಾರಾಷ್ಟ್ರದ ನಾಗ್ಪುರದಲ್ಲಿರುವ ಆರ್‌ಎಸ್‌ಎಸ್ ಕೇಂದ್ರ ಕಚೇರಿಯನ್ನು ಬಾಂಬ್ ಇಟ್ಟು ಸ್ಪೋಟಿಸುವುದಾಗಿ ಅಜ್ಞಾತ ವ್ಯಕ್ತಿಯೊಬ್ಬರು ಶನಿವಾರ ಕರೆ ಮಾಡಿದ ಕಾರಣ ಅಲ್ಲಿ ಭದ್ರತಾ ವ್ಯವಸ್ಥೆಯನ್ನು ಬಿಗಿಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
‘ಪೊಲೀಸ್ ನಿಯಂತ್ರಣ ಕೊಠಡಿಗೆ ಮಧ್ಯಾಹ್ನ 1 ಗಂಟೆಗೆ ಈ ಕರೆ ಬಂದಿದೆ. ಮಹಲ್ ಪ್ರದೇಶದಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಚೇರಿಯನ್ನು ಬಾಂಬ್ ಮೂಲಕ ಸ್ಪೋಟಿಸುವುದಾಗಿ ಕರೆ ಮಾಡಿದ ವ್ಯಕ್ತಿ ಬೆದರಿಕೆ ಹಾಕಿದ್ದ’ ಎಂದು ಡಿಸಿಪಿ ಗೋರಖ್ ಭಾಮ್ರೆ ತಿಳಿಸಿದ್ದಾರೆ.
ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನ ದಳವನ್ನು ಸ್ಥಳಕ್ಕೆ ಕರೆಸಿ ಶೋಧ ನಡೆಸಲಾಯಿತು. ಆದರೆ ಅನುಮಾನಸ್ಪದ ವಸ್ತುಗಳು ಪತ್ತೆಯಾಗಲಿಲ್ಲ ಎಂದು ತಿಳಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಪಹರೆ ಬಿಗಿಗೊಳಿಸಲಾಗಿದೆ. ಪೊಲೀಸರು ಕರೆಯ ಜಾಡು ಪತ್ತೆ ಹಚ್ಚುತ್ತಿದ್ದಾರೆ ಎಂದೂ ಡಿಸಿಪಿ ಮಾಹಿತಿ ನೀಡಿದ್ದಾರೆ.